ಸುದ್ಧಿಕನ್ನಡ ವಾರ್ತೆ

Goa: ಗೋವಾ ಬೀಚ್ ನಲ್ಲಿ ಪ್ರವಾಸಿಗರಿಗೆ ತೊಂದರೆ ಕೊಡುತ್ತಿದ್ದ ಅಕ್ರಮವಾಗಿ ವಿವಿಧ ವಸ್ತುಗಳ ಮಾರಾಟಗಾರರ ವಿರುದ್ಧ ಪೋಲಿಸರು ಕ್ರಮ ಜರುಗಿಸಿದ್ದು ನಾಲ್ವರನ್ನು ಪೋಲಿಸರು ಬಂಧಿಸಿದ್ದಾರೆ. ಪ್ರವಾಸಿಗರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೋಲಿಸರು ಎಚ್ಚರಿಕೆ ನೀಡಿದ್ದಾರೆ.

ಗೋವಾದ ಹರಮಲ್ ಬೀಚ್ ನಲ್ಲಿ ಈ ಘಟನೆ ನಡೆದಿದೆ. ಕಿನಾರಿ ಭಾಗದಲ್ಲಿ ವಿವಿಧ ವಸ್ತುಗಳನ್ನು ಮಾರಾಟ ಮಾಡುವವರು ಪ್ರವಾಸಿರಿಗೆ ತೊಂದರೆ ಬಕೊಡುತ್ತಾರೆ. ತಾವು ಮಾರಾಟ ಮಾಡುವ ವಸ್ತುಗಳನ್ನು ಖರೀದಿಸುವಂತೆ ಪ್ರವಾಸಿಗರಿಗೆ ಅನಗತ್ಯ ಒತ್ತಡ ಹೇರುತ್ತಾರೆ. ಇದರಿಂದಾಗಿ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಹೆಚ್ಚಿನ ತೊಂದರೆಯುಂಟಾಗುತ್ತಿದೆ ಎಂದು ಸ್ಥಳೀಯ ಪಂಚಾಯತ ಸದಸ್ಯ ಪ್ರವೀಣ ವಾಯಂಗಣಕರ್ ಮಾಹಿತಿ ನೀಡಿದರು.

ಬೀಚ್ ಗೆ ಆಗಮಿಸುವ ಪ್ರವಾಸಿಗರಿಗೆ ಉಂಟಾಗುತ್ತಿರುವ ತೊಂದರೆ ನಿವಾರಿಸಲು ಮಾಂದ್ರೆ ಪೋಲಿಸ್ ನಿರೀಕ್ಷಕ ಶೆರಿಫ್ ರವರು ಪೋಲಿಸ್ ಗಸ್ತನ್ನು ಹೆಚ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.