ಸುದ್ಧಿಕನ್ನಡ ವಾರ್ತೆ
Goa (Panaji): ಪಣಜಿಯ ಮಾಂಡವಿ ಸೇತುವೆಯ ಬಳಿ ಹೊರ ರಾಜ್ಯದ ಕಾರ್ಮಿಕನೋರ್ವನ ಕೊಲೆ ನಡೆದಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಕಾರ್ಮಿಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪರ್ವರಿ ಪೋಲಿಸ್ ಘಟನಾ ಸ್ಥಳಕ್ಕೆ ಆಗಮಿಸಿ ಪಂಚನಾಮೆ ನಡೆಸಿ ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಲಭ್ಯವಾಗಿರುವ ಮಾಹಿತಿಯ ಅನುಸಾರ- ಪಣಜಿ ಸಮೀಪದ ಬೇತಿಮ್ ಮಾಲಿಮ್ ಜೆಟ್ಟಿಬಳಿ ಹೊರರಾಜ್ಯದ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ. ಕಾರ್ಮಿಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ನಡೆಸಲಾಗಿದೆ ಎಂಬುದು ಪೋಲಿಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.
ಕೊಲೆಗೈದ ಆರೋಪಿ ಪರಾರಿಯಾಗಿದ್ದು, ಈತನಿಗಾಗಿ ಪೋಲಿಸರು ಶೋಧ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ಈ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರ್ವರಿ ಪೋಲಿಸರು ಹೆಚ್ಚಿ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.