Banner Ad

ಸುದ್ಧಿಕನ್ನಡ ವಾರ್ತೆ
Goa: ಗೋವಾದ ಮಡಗಾಂವನಲ್ಲಿರುವ ಹೋಟೆಲ್‍ವೊಂದರಲ್ಲಿ ತಂಗಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವೃಕ್ತಿಯೋರ್ವರು ಮೃತಾವಸ್ಥೆಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

ಮೃತ ವೈಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡಿಗ ಮಾಲದ ಮನೆಯ ಸುಬ್ರಾಯ ಭಟ್ (53) ಎಂದು ಗುರುತಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಲಭ್ಯವಾಗಿರುವ ಮಾಹಿತಿಯ ಅನುಸಾರ- ಗೋವಾದ ಮಡಗಾಂವನ ಹೋಟೆಲ್‍ವೊಂದರಲ್ಲಿ ಯಲ್ಲಾಪುರದ ಸುಬ್ರಾಯ ಭಟ್ ವಾದ್ತವ್ಯ ಹೂಡಿದ್ದರು. ಆದರೆ ಮರುದಿನ ಬೆಳಗಾದರೂ ರೂಮಿನಿಂದ ಹೊರ ಬಾರದ ಕಾರಣ ಅನುಮಾನಗೊಂಡು ಹೋಟೆಲ್ ಸಿಬ್ಬಂಧಿ ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆರೆಯಲಿಲ್ಲ ಎನ್ನಲಾಗಿದೆ.

Banner Ad

ನಂತರ ಅಗ್ನಿಶಾಮಕ ದಳದ ಸಿಬ್ಬಂಧಿಗಳಿಗೆ ಮಾಹಿತಿ  ನೀಡಿದಾಗ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂಧಿ ಕೋಣೆಯ ಬಾಗಿಲು ತೆರೆದು ನೋಡಿದಾಗ ಸುಬ್ರಾಯ ಭಟ್ ರವರು ಮಂಚದ ಮೇಲೆ ಮಲಗಿರುವ ಸ್ಥಿತಿಯಲ್ಲಿದ್ದರು. ಕೂಡಲೇ ಇವರನ್ನು ಮಡಗಾಂವ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಇವರು ಮೃತ ಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಇವರ ಸಾವಿಗೆ ನಿಖರವಾದ ಕಾರಣ ತಿಳಿದುಬರಬೇಕಾಗಿದೆ.

Banner Ad