ಸುದ್ದಿ ಕನ್ನಡ ವಾರ್ತೆ
ಪಣಜಿ: ಗೋವಾದ ಕುಂಚೆಲಿಮ್ ಕೇಕ್ ಅಂಗಡಿ ಮತ್ತು ಚಿಕನ್ ಸೆಂಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗದಗದ 22 ವರ್ಷದ ಈಶ್ವರ್ ಗೋಪಿ ಹರ್ನಿಶಿಕಾರಿಯನ್ನು ಗೋವಾದ mapusa ಪೊಲೀಸರು ಬಂಧಿಸಿದ್ದಾರೆ.
ಬಂದಿತ ಆರೋಪಿಯನ್ನು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
