ಸುದ್ದಿ ಕನ್ನಡ ವಾರ್ತೆ
ಮಂಗಳೂರು: ನಗರದ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಮೃತಪಟ್ಟ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸುವ ವೇಳೆ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದರ ಜೊತೆಗೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಘಟನೆಯ ಸಮಯದಲ್ಲಿ ವಾರ್ಡ್‌ನಲ್ಲಿ ಇದ್ದವರಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಳುವಿನ ನಿಖರ ಸಂದರ್ಭ ಮತ್ತು ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.