ಪಣಜಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರವರು ಶನಿವಾರ ಅಗಷ್ಟ 24 ರಂದು ಗೋವಾಕ್ಕೆ ಆಗಮಿಸಲಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರವರ ಗೋವಾ ಭೇಟಿ ರದ್ದಾದ ಹಿನ್ನೆಲೆಯಲ್ಲಿ ಪಣಜಿಯ ಬಿಜೆಪಿ ನೂತನ ಕಛೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ದೇವೇಂದ್ರ ಫಡ್ನವೀಸ್ ನೆರವೇರಿಸಲಿದ್ದಾರೆ ಎಂದು ಬಿಜೆಪಿ ಗೋವಾ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಗೋವಾ ರಾಜಧಾನಿ ಪಣಜಿಯ ಸಮೀಪವಿರುವ ಪೊಂಡಾ-ಪಣಜಿ ಬೈಪಾಸ್ ರಸ್ತೆಯ ಚಿಂಬಲ್‍ನಲ್ಲಿ ಬಿಜೆಪಿ ನೂತನ ಕಛೇರಿ ನಿರ್ಮಾಣಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಸಂಜೆ 4 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಲಿದ್ಸಾರೆ ಎಂಬ ಮಾಹಿತಿ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ನರೇಂದ್ರ ಸಾವೈಕರ್, ಶಾಸಕ ಸಂಕಲ್ಪ ಅಮೋಣಕರ್, ದಾಮು ನಾಯ್ಕ ಉಪಸ್ಥಿತರಿದ್ದರು.
ಮಂತ್ರಿಮಂಡಳ ವಿಸ್ತರಣೆಗೆ ತುರ್ತು ಬ್ರೇಕ್…
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಗೋವಾ ಭೇಟಿ ರದ್ದಾದ ಹಿನ್ನೆಲೆಯಲ್ಲಿ ಗೋವಾ ಸರ್ಕಾರದ ಮಂತ್ರಿಮಂಡಳ ವಿಸ್ತರಣೆಗೆ ಸದ್ಯಕ್ಕೆ ಬ್ರೇಕ್ ಬಿದ್ದಂತಾಗಿದೆ.