ಸುದ್ಧಿಕನ್ನಡ ವಾರ್ತೆ
Goa: ಗೋವಾ ವೈದ್ಯಕೀಯ ಮಹಾವಿದ್ಯಾಲಯ ಬಾಂಬೋಲಿಂ ಬಳಿ ಶನಿವಾರ ಮಧ್ಯಾನ್ಹ ಸಂಭವಿಸಿದ ವಿಚಿತ್ರ ಅಪಘಾತವೊಂದನ್ನು ಕಾರಿನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರೋರ್ವರು ವೀಡಿಯೊ ಮಾಡಿದ್ದಾರೆ. ಭಾರಿ ಸರಕು ಸಾಗಾಣೆಯ ಟ್ರಕ್ ತಾಂತ್ರಿಕ ದೋಷದಿಂದಾಗಿ ಒಂದು ಟೈಯರ್ ಕಳಚಿ ಹೋಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಈ ಅಪಘಾತದ ನಂತರ ಟ್ರಕ್ ಚಾಲಕನು ಟ್ರಕ್ ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಾರಿಯಾಗುವ ದೃಶ್ಯ ಕೂಡ ವೀಡಿಯೋದಲ್ಲಿ ಸೆರೆಯಾಗಿದೆ. ಈ ವೀಡಿಯೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ಜನರಿಂದ ಆಕ್ರೋಷ ವ್ಯಕ್ತವಾಗುತ್ತಿದೆ.