ಸುದ್ಧಿಕನ್ನಡ ವಾರ್ತೆ
OLD GOA: ಗೋವಾದಲ್ಲಿ ಮಂಗಳವಾರ ಮಧ್ಯಾನ್ಹ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟೆಂಪೋ, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಓಲ್ಡ ಗೋವಾದ ಖೋರ್ಲಿ-ಮಳಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ತಂಪು ಪಾನೀಯ ಸಾಗಿಸುತ್ತಿದ್ದ ಟೆಂಪೋ ರಸ್ತೆಗೆ ಅಡ್ಡವಾಗಿ ಪ್ಲಟಿಯಾಗಿದೆ. ಈ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರು ಬಾಂಬೋಲಿಯ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ಈ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಓಲ್ಡ ಗೋವಾ ಪೊಲೀಸರು ವಾಹನ ಅಪಘಾತ ಪ್ರಕರಣವನ್ನು ದಾಖಲಿಸಿಕೊಂಡು ಈ ಕುರಿತು ತನಿಖೆ ಆರಂಭಿಸಿದ್ದಾರೆ.