ಸುದ್ಧಿಕನ್ನಡ ವಾರ್ತೆ
Goa: ಗೋವಾದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಎರಡನೇಯ ಮಹಡಿಯಿಂದ ಬಿದ್ದು ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಶುಕ್ರವಾರ ಸಂಭವಿಸಿದೆ.(A gruesome incident occurred on Friday when a laborer fell from the second floor of an under-construction building in Goa and died on the spot).
ಗೋವಾದ ಹಣಜುಣದಲ್ಲಿ ನಿರ್ಮಾಣ ಹಂತದ ಕಟ್ಟಡದ ಎರಡನೇಯ ಮಹಡಿಯಲ್ಲಿ ಶುಕ್ರವಾರ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಪಶ್ಚಿಮ ಬಂಗಾಳ ಮೂಲದ ನಾರಾಯಣ ರಾಯ್(35) ಎಂಬ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಪೋಲಿಸರು ಆಗಮಿಸಿ ಘಟನೆಯ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.