ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ನವೆಂಬರ್ 10 ರಂದು ಗೋವಾದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ರವರಿಗೆ ಆಮಂತ್ರಿಸಲಾಯಿತು.
ಗೋವಾ ರಾಜ್ಯ ಕರ್ನಾಟಕ ರಾಜ್ಯೋತ್ಸವ ಸಮೀತಿ ಗೌರವಾಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ, ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮೀಶನರ್ ಕುರುಬ ಮುಕಡಪ್ಪ, ಕಸಾಪ ಗೋವಾ ರಾಜ್ಯ ಗೌ. ಕಾರ್ಯದರ್ಶಿ ನಾಗರಾಜ ಗೋಂದಕರ್ ರವರು ಸಚಿವ ವಿ. ಸೋಮಣ್ಣ ರವರನ್ನು ಭೇಟಿ ಮಾಡಿ ರಾಜ್ಯೋತ್ಸವದ ಆಮಂತ್ರಣ ನೀಡಿ ಆಹ್ವಾನಿಸಿದರು.
ಇಷ್ಟೇ ಅಲ್ಲದೆಯೇ ಕರ್ನಾಟಕ ರಾಜ್ಯ ಸಚಿವ ಸತೀಶ್ ಜಾರಕಿಹೊಳಿ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ರವರನ್ನು ಗೋವಾ ರಾಜ್ಯದಲ್ಲಿ ನವೆಂಬರ್ 10 ರಂದು ನಡೆಯಲಿರುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.