Banner Ad

ಸುದ್ದಿ ಕನ್ನಡ ವಾರ್ತೆ

ಪಣಜಿ: ಕರ್ನಾಟಕ ರಾಜ್ಯೋತ್ಸವ ಸಮೀತಿ ಗೋವಾ ವತಿಯಿಂದ ನವೆಂಬರ್ 10 ರಂದು ಬೆಳಿಗ್ಗೆ 9.30 ಕ್ಕೆ ಪರ್ವರಿಯ ಸಂತ ಗಾಡ್ಗೆ ಮಹಾರಾಜ ಸಭಾಂಗಣದಲ್ಲಿ ಗೋವಾದ ಎಲ್ಲ ಕನ್ನಡಪರ ಸಂಘಟನೆಗಳ ಸಹಕಾರದಲ್ಲಿ “ಗೋವಾ ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾವರಣೆ” ಕಾರ್ಯಕ್ರಮ ಆಯೋಜಿಸಲಾಗಿದೆ.

Banner Ad

ಸಮಾರಂಭದಲ್ಲಿ ಬೆಳಗಾವಿಯ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿ ಹಾಗೂ ಬಾಗಲಕೋಟೆಯ ಸಿದ್ಧನಕೊಳ್ಳದ ಮಠದ ಧರ್ಮಾಧಿಕಾರಿಗಳಾದ ಡಾ.ಶಿವಕುಮಾರ ಮಹಾಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಸಮಾರಂಭದ ಉಧ್ಘಾಟನೆ ನೆರವೇರಿಸಲಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಸಮೀತಿ ಗೋವಾದ ಅಧ್ಯಕ್ಷ ಮುರಳಿ ಮೋಹನ್ ಶೆಟ್ಟಿ ಹಾಗೂ ಕರ್ನಾಟಕ ರಾಜ್ಯೋತ್ಸವ ಸಮೀತಿಯ ಗೌರವಾಧ್ಯಕ್ಷ ಸಿದ್ಧಣ್ಣ ಮೇಟಿ ಉಪಸ್ಥಿತರಿರುವರು.

ವಿಶೇಷ ಆಮಂತ್ರಿತರಾಗಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಮುಖ್ಯ ಅತಿಥಿಗಳಾಗಿ ಕೇಂದ್ರ ಸರ್ಕಾರದ ರಾಜ್ಯ ರೈಲ್ವೆ ಮಂತ್ರಿ ವಿ.ಸೋಮಣ್ಣ, ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಕೇಂದ್ರ ಸಚಿವ ಶ್ರೀಪಾದ ನಾಯಕ, ಗೋವಾ ರಾಜ್ಯ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ, ರಾಜ್ಯಸಭಾ ಸದಸ್ಯ ಸದಾನಂದ ತಾನಾವಡೆ, ಎನ್ ಆರ್ ಐ ಕಮೀಶನರ್ ನರೇಂದ್ರ ಸಾವೈಕರ್, ಕಲಂಗುಟ್ ಶಾಸಕ ಮೈಕಲ್ ಲೋಬೊ, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ, ಕರ್ನಾಟಕ ತಾಂಡಾ ನಿಯಮಿತ ನಿಗಮದ ಅಧ್ಯಕ್ಷ ಎನ್.ಜಯದೇವ ನಾಯಕ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ್, ಬಿಟೋನಾ ಗ್ರಾ.ಪಂ ಸದಸ್ಯ ರಾಜ ಶಿರೋಡಕರ್, ಕೇಂದ್ರ ಕಿಸಾನ ಸಮೀತಿಯ ನಿರ್ದೇಶಕ ರಾಜು.ಆರ್.ಎಸ್, ಲೋಕಸೇವಾ ಆಯೋಗದ ಮಾಜಿ ಸದಸ್ಯ ಕೆ.ಮುಕಡಪ್ಪ ಸೇರಿದಂತೆ ಗೋವಾದ ವಿವಿಧ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿರುವರು.

ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದ್ದು, ಈ ಎಲ್ಲ ಕಾರ್ಯಕ್ರಮಗಳಿಗೆ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಗೋವಾ ಕರ್ನಾಟಕ ರಾಜ್ಯೋತ್ಸವ ಸಮೀತಿ ಪ್ರಕಟಣೆಯಲ್ಲಿ ಕೋರಿದೆ.

Banner Ad