ಸುದ್ಧಿಕನ್ನಡ ವಾರ್ತೆ
Goa IFFI: ಗೋವಾದಲ್ಲಿ ನಡೆಯುತ್ತಿರುವ 55 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Inter National Film Festival Of India)ಕನ್ನಡದ ವೆಂಕ್ಯಾ ಹಾಗೂ ಕೆರೆಬೇಟೆ ಸಿನಿಮಾಗಳು ಆಯ್ಕೆಯಾಗಿವೆ. 55 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತೀಯ ಪನೋರಮಾ ವಿಭಾಗದಲ್ಲಿ ಈ ಎರಡೂ ಚಿತ್ರಗಳು ಪ್ರದರ್ಶನ ಕಾಣಲಿದೆ.
ಗೋವಾದಲ್ಲಿ 55 ನೇಯ ಭಾರತೀಯ ಆಂತರಾಷ್ಟ್ರೀಯ ಸಿನಿಮೋತ್ಸವ (IFFI) ನವೆಂಬರ್ 20 ರಂದು ಆರಂಭಗೊಂಡಿದ್ದು 28 ರವರೆಗೆ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಚಲನಚಿತ್ರ ಕ್ಷೇತ್ರದ ದಿಗ್ಗಜರು ಭಾಗಿಯಾಗಿದ್ದಾರೆ. ಜಾಗತಿಕ ಮಟ್ಟದಲ್ಲಿ ಮುನ್ನಡೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ವೆಂಕ್ಯಾ ಹಾಗೂ ಕೆರೆಬೇಟೆ ಚಲನಚಿತ್ರಗಳು ಪ್ರದರ್ಶನ ಕಾಣಲಿದೆ.
ಕೆರೆಬೇಟೆ ಚಲನಚಿತ್ರ ರಾಜಗುರು ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾ. ಗೌರಿಶಂಕರ ನಾಯಕನಾಗಿ ಈ ಚಿತ್ರದಲ್ಲಿ ನಟಿಸಿದ್ದಾರೆ. ನಟನೆಯ ಜೊತೆಗೆ ಗೌರಿಶಂಕರ್ ರವರು ನಿರ್ಮಾಣದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದರು. ಕೆರೆಬೇಟೆ ಸಿನಿಮಾ ಬಗ್ಗೆ ಹೇಳುವುದಾದರೆ ಅಪ್ಪಟ ಹಳ್ಳಿ ಸೊಗಡಿನ ಚಿತ್ರ. ಈ ಸಿನಿಮಾ ಮಾರ್ಚ 15 ಕ್ಕೆ ರಿಲೀಸ್ ಆಗಿತ್ತು. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿದ್ದ ಈ ಸಿನೆಮಾ ಮಲೆನಾಡಿನ ಮೀನು ಬೇಟೆ ಸಂಸ್ಕøತಿಯನ್ನು ಪರಿಚಯಿಸಿತ್ತು.
ಈ ಸಿನೆಮಾದಲ್ಲಿ ನಾಯಕ ಗೌರಿ ಶಂಕರ್ ನಾಯಕಿ ಬಿಂದು ಗೌಡ ಜೊತೆಗೆ ಗೋಪಾಲ ದೇಶಪಾಂಡೆ, ಸಂಪತ್ ಕುಮಾರ್ ಹರಿಣಿ ಸೇರಿದಂತೆ ಹಲವು ದೊಡ್ಡ ಕಲಾವಿದರು ನಟಿಸಿದ್ದಾರೆ.
ವೆಂಕ್ಯಾ ಚಲನಚಿತ್ರವು ಡೊಳ್ಳು ಸಿನೆಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕೊಂಬಿನೇಶನ್ ನಲ್ಲಿ ವೆಂಕ್ಯಾ ಚಿತ್ರ ಮೂಡಿಬಂದಿದೆ. ವೆಂಕ್ಯಾನಿಗೆ ಸಾಗರಪುರಾಣಿಕ ಎಕ್ಷನ್ ಕಟ್ ಹೇಳುವ ಮೂಲಕ ನಾಯಕರಾಗಿದ್ದಾರೆ. ಚಿತ್ರದಲ್ಲಿ ಸಾಗರ್ ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದಾರೆ.
ಉತ್ತರ ಕರ್ನಾಟಕದ ಕಥೆ ಆಧಾರಿತ ವೆಂಕ್ಯಾ ಸಿನೆಮಾವನ್ನು ಅಪೇಕ್ಷಾ ಮತ್ತು ಪವನ್ ನಿರ್ಮಾಣ ಮಾಡುತ್ತಿದ್ದಾರೆ. ಪವನ್ ಸ್ನೇಹಿತರಾದ ಅವಿನಾಶ,ವಿರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿದೆ.
ಗೋವಾ ರಾಜಧಾನಿ ಪಣಜಿಯಲ್ಲಿ ನಡೆಯುತ್ತಿರುವ 55 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ಎರಡು ಸಿನೆಮಾಗಳು ತೆರೆ ಕಾಣುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.