ಸುದ್ಧಿಕನ್ನಡ ವಾರ್ತೆ
ಪಣಜಿ: ಓಲ್ಡ ಗೋವಾದಲ್ಲಿ ಸಂತ ಫ್ರಾನ್ಸಿಸ್ ಜೇವಿಯರ್ ರವರ ಶವದರ್ಶನ ಕಾರ್ಯಕ್ರಮ ಆರಂಭಗೊಂಡಿದ್ದು, ಧೇಶಾದ್ಯಂತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹರಿದುಬರುತ್ತಿದ್ದಾರೆ. ಬುಧವಾರ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ರವರು ಓಲ್ಡ ಗೋವಾಕ್ಕೆ ಆಗಮಿಸಿ ಸಂತ ಫ್ರಾನ್ಸಿಸ್ ಜೇವಿಯರ್ ರವರ ಶವ ದರ್ಶನ ಪಡೆದುಕೊಂಡರು.

ಸಂತ ಫ್ರಾನ್ಸಿಸ್ ಜೇವಿಯ್ ರವರ ಶವದರ್ಶನ ಸಮಾರಂಭ ನವೆಂಬರ್ 21 ರಿಂದ ಆರಂಭಗೊಂಡಿದ್ದು ಪ್ರತಿದಿನ ದೇಶ ವಿದೇಶಗಳಿಂದ ಹೆಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಪ್ರತಿದಿನ ತಮಿಳುನಾಡು, ಕರ್ನಾಟಕ, ಕೇರಳ, ಮಹಾರಾಷ್ಟ್ರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಇಷ್ಟೆ ಅಲ್ಕದೆಯೇ ಗೋವಾ ರಾಜ್ಯದ ಮೂಲೆ ಮೂಲೆಯಿಂದಲೂ ಕ್ರೈಸ್ತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.