ಸುದ್ಧಿಕನ್ನಡ ವಾರ್ತೆ
Goa: ಗೋವಾ ಕನ್ನಡ ಸಮಾಜದ ಆಶ್ರಯದಲ್ಲಿ ಪಣಜಿಯಲ್ಲಿ ಶನಿವಾರ ಆಯೋಜಿಸಲಾಗಿರುವ ಕನ್ನಡ ಡಿಂಡಿಮ ಉತ್ಸವದ ಮುಖ್ಯ ಅತಿಥಿಗಳಾದ ಗೋವಾ ರಾಜ್ಯ ಪತ್ರಕರ್ತರ ಸಂಘಟನೆಯ ಅಧ್ಯಕ್ಷ ರಾಜತಿಲಕ್ ನಾಯ್ಕ ರವರನ್ನು ಗೋವಾ ಕನ್ನಡ ಸಮಾಜದ ವತಿಯಿಂದ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣಕುಮಾರ್, ಕಾರ್ಯದರ್ಶಿ ಶ್ರೀಕಾಂತ ಲೋಣಿ, ಉಪಾಧ್ಯಕ್ಷ ಶ್ರೀನಿವಾಸ್ ಪೈ ಉಪಸ್ಥಿತರಿದ್ದರು. ಅಂತೆಯ ಉಧ್ಘಾಟಕರಾದ ಅಶೋಕ ಶೆಟ್ಟಿ ಹಾಗೂ ಗೌರವ ಅತಿಥಿಗಳಾದ ಹನುಮಂತ ಗೊರವರ್ ರವರನ್ನು ಕೂಡ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.

ಕಾರ್ಯಕ್ರಮ ವಿವರ:-
ಗೋವಾ ಕನ್ನಡ ಸಮಾಜ ಪಣಜಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಪಣಜಿಯ ಮೆನೆಝಸ್ ಬ್ರಗಾಂಜ ಸಭಾಗೃಹದಲ್ಲಿ ಕನ್ನಡ ಡಿಂಡಿಮ ಉತ್ಸವ-2024 ಕಾರ್ಯಕ್ರಮ ಆಯೋಜಿಸಲಾಗಿದೆ.

ಉದ್ಯಮಿ ಅಶೋಕ ಶೆಟ್ಟಿ ಸಮಾರಂಭದ ಉಧ್ಘಾಟನೆಯನ್ನು ನೆರವೇರಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಗೋವಾ ರಾಜ್ಯ ಪತ್ರಕರ್ತರ ಸಂಘಟನೆಯ ಅಧ್ಯಕ್ಷ ರಾಜತಿಲಕ್ ನಾಯಕ್ ಉಪಸ್ಥಿತರಿರುವರು, ಗೌರವ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಪಣಜಿ ತಾಲೂಕಾ ಘಟಕದ ಅಧ್ಯಕ್ಷ ಹನುಮಂತ ಗೊರವರ್ ಉಪಸ್ಥಿತರಿರುವರು.

ಸಭಾ ಕಾರ್ಯಕ್ರಮದ ನಂತರ ಅಂಜು ದೇಸಾಯಿ, ಉಮಾರಾವ್ ಹಾಗೂ ಲಲಿತಾ ಭಜನಾ ಮಂಡಳಿಯಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದೆ.