ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾ ಕನ್ನಡ ಸಮಾಜ ಪಣಜಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಸಂಯುಕ್ತ ಆಶ್ರಯದಲ್ಲಿ ಪಣಜಿಯ ಮೆನೆಜಸ್ ಬ್ರಗಾಂಜ ಸಭಾಗೃಹದಲ್ಲಿ ಆಯೋಜಿಸಿದ್ದ ಕನ್ನಡ ಡಿಂಡಿಮ ಉತ್ಸವ-2024 ಕಾರ್ಯಕ್ರಮಕ್ಕೆ ಗೋವಾ ರಾಜ್ಯದ ಮೂಲೆ ಮೂಲೆಯಿಂದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದುದು, ಕಾರ್ಯಕ್ರಮ ಯಶಸ್ವಿಗೆ ಸಾಕ್ಷಿಯಾಗಿದೆ.

ಶನಿವಾರ ಪಣಜಿಯಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಮತ್ತು ಸುಂದರವಾಗಿ ಮೂಡಿಬಂತು. ಸಭಾಗೃಹ ಕನ್ನಡಿಗರಿಂದ ಸಂಪೂರ್ಣ ಭರ್ತಿಯಾಗಿತ್ತು. ಆಗಮಿಸಿದ್ದ ಎಲ್ಲರಿಗೂ ಕನ್ನಡ ಸಮಾಜದ ವತಿಯಿಂದ ಬೆಳಿಗ್ಗೆ ಉಪಹಾರ ಮತ್ತು ಮಧ್ಯಾನ್ಹ ಸಹಭೋಜನದ ವ್ಯವಸ್ಥೆ ಮಾಡಲಾಗಿತ್ತು. ಸಭಾಗೃಹದಲ್ಲಿದ್ದ ಕನ್ನಡಿಗರು ಸಭಾ ಕಾರ್ಯಕ್ರಮ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಹೀಗೆ ಸಂಪೂರ್ಣ ಕಾರ್ಯಕ್ರಮ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.