ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಪತ್ರಕರ್ತೆ ಸೇರಿ ಮೂವರು ಸಾವನ್ನಪ್ಪಿದ ಭೀಕರ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.(near Chikkanahalli in Shira taluk of Tumkur district in which a private bus traveling from Goa to Bangalore overturned and killed three people including a journalist.)

ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸನ್ ರೈಸರ್ಸ ಖಾಸಗಿ ಬಸ್ಸು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಿಕ್ಕನಳ್ಳಿ ಬಿಡ್ಜ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಈ ಘಟನೆ ಬೆಳಗಿನ ಜಾವ 4.45 ರ ಸುಮಾರು ನಡೆದಿದೆ. ಈ ಘಟನೆಯಲ್ಲಿ ದೆಹಲಿ ಮೂಲದ ಪತ್ರಕರ್ತೆ ಪೂರ್ವಿ ಹಾಗೂ ಶುಭಾಳಿ ಸಿಂಗ್, ಪ್ರಿಯಾಂಕ ಎಂಬ ಮೂವರು ಮಹಿಳೆಯರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬೆಳ್ಳಂಬೆಳ್ಳಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರನ್ನು ಸಿದ್ಧಗಂಗಾ ಆಸ್ಪತ್ರೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಎಸ್ಪಿ ವೆಂಕಟೇಶ ಕೆವಿ ಭೇಟಿ ನೀಡಿ ಪರಿಶಿಲನೆ ನಡೆಸಿದ್ದು ಕಳ್ಳಂಬೆಳ್ಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.