ಸುದ್ಧಿಕನ್ನಡ ವಾರ್ತೆ
ಪಣಜಿ: ಪಣಜಿ ಸಮೀಪದ ಮೆರಶಿ ಸರ್ಕಲ್ ಬಳಿಯ ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಅವಸ್ಥೆಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿರುವುದರಿಂದ ವ್ಯಕ್ತಿಯ ಗುರುತು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬಾಂಬೋಲಿಂ ಫೊರೆನ್ಸಿಕ್ ಮೆಡಿಸಿನ್ ವಿಭಾಗಕ್ಕೆ ಕಳುಹಿಸಲಾಗಿದೆ. ಈ ಕುರಿತಂತೆ ಓಲ್ಡಗೋವಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೆರಶಿಯಲ್ಲಿ ರಸ್ತೆಯ ಪಕ್ಕದಲ್ಲಿ ಮರಗಿಡಗಳ ಪೊದೆಯಲ್ಲಿ ಮೃತದೇಹ ಪತ್ತೆಯಾಗಿರುವುದಾಗಿ ಪೋಲಿಸ್ ನಿಯಂತ್ರಣ ಕಕ್ಷಕ್ಕೆ ಮಾಹಿತಿ ಬಂದಿತ್ತು. ಈ ಮಾಹಿತಿಯ ಆಧಾರದ ಮೇಲೆ ಓಲ್ಡಗೋವಾ ಪೋಲಿಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಬಟ್ಟೆಯ ಸಹಾಯದಿಂದ ವ್ಯಕ್ತಿ ನೇಣು ಬಿಗಿದುಕೊಂಡಿರುವುದು ಪೋಲಿಸರಿಗೆ ಕಂಡುಬಂದಿತ್ತು. ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.