ಸುದ್ಧಿಕನ್ನಡ ವಾರ್ತೆ
Goa: ಗೋವಾದಲ್ಲಿ ಅಪರಾಧಗಳ ನಿಯಂತ್ರಣಕ್ಕೆ ಗೋವಾ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ದಾಖಲೆಯಿಲ್ಲದೆಯೇ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಗೋವಾ ಸರ್ಕಾರ ದಂಡ ವಿಧಿಸುತ್ತಿದೆ. ಇದೀಗ ದಕ್ಷಿಣ ಗೋವಾದ ನಾಗರಿಕರು ಬಾಡಿಗೆದಾರರ ವಿವರವನ್ನು ಪೆÇಲೀಸ್ ಠಾಣೆಗೆ ದಾಖಲೆಗಳ ಸಮೇತ ನೀಡುವ ಮುನ್ನ ಯಾರನ್ನೂ ಬಾಡಿಗೆದಾರರಾಗಿ ಇಟ್ಟುಕೊಳ್ಳಬಾರದು ಎಂದು ದಕ್ಷಿಣ ಗೋವಾ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸಂರಕ್ಷಣಾ ಸಂಹಿತೆಯ ಸೆಕ್ಷನ್ 163 ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ. ಆದೇಶವನ್ನು ಪಾಲಿಸದಿದ್ದರೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 233 ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಎಲ್ಲರಿಗೂ ವೈಯಕ್ತಿಕ ನೋಟಿಸ್ ನೀಡಲು ಸಾಧ್ಯವಿಲ್ಲದ ಕಾರಣ, ದಕ್ಷಿಣ ಗೋವಾ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಹಿಡುವಳಿದಾರರ ಪರಿಶೀಲನಾ ಕಾಯ್ದೆಯಡಿ ಬಾಡಿಗೆದಾರರ ಗುರುತಿನ ಚೀಟಿಯೊಂದಿಗೆ ಮಾಹಿತಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಬಾಡಿಗೆದಾರರ ಮಾಹಿತಿ ನೀಡದಿದ್ದಲ್ಲಿ ಹತ್ತು ಸಾವಿರ ರೂ. ವರೆಗೆ ದಂಡ ವಿಧಿಸಲಾಗುವುದು. ಡಿಸೆಂಬರ್ 1 ರಿಂದ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾಗಿದೆ.
ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ಎಟಿಎಂಗಳ ಹೊರಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸುವುದರೊಂದಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಆದೇಶಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ದಕ್ಷಿಣ ಗೋವಾ ಜಿಲ್ಲಾಧಿಕಾರಿ ಈ ಆದೇಶ ನೀಡಿದ್ದಾರೆ.