ಸುದ್ಧಿಕನ್ನಡ ವಾರ್ತೆ
Goa: ಹೊಸ ವರ್ಷವನ್ನು ಸ್ವಾಗತಿಸಲು ಕರಾವಳಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಅವಧಿಯಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾಗದಂತೆ ಮತ್ತು ಮಾದಕ ವಸ್ತುಗಳ ಮಾರಾಟ ಅಥವಾ ಸೇವಮೆ ತಡೆಯಲು ಗೋವಾ ಪೆÇಲೀಸರು ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ. ಇದಕ್ಕಾಗಿ ರಾಜ್ಯದಲ್ಲಿ 12 ಶ್ವಾನ ತಂಡಗಳೊಂದಿಗೆ ಡ್ರೋನ್‍ಗಳನ್ನು ಬಳಸಲಾಗುವುದು ಎಂದಿ ಉತ್ತರ ಗೋವಾ ಪೆÇಲೀಸ್ ವರಿಷ್ಠಾಧಿಕಾರಿ ಅಕ್ಷತ್ ಕೌಶಲ್ ಈ ಮಾಹಿತಿ ನೀಡಿದ್ದಾರೆ. ಇದಲ್ಲದೆ, ಗೋವಾ ಪೆÇಲೀಸ್, ಅಗ್ನಿಶಾಮಕ ದಳ ಮತ್ತು ರಾಜ್ಯದ ಇತರ ಇಲಾಖೆಗಳ 3000 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಪೆÇಲೀಸ್ ಸಿಬ್ಬಂದಿ ಹಾಗೂ 9 ಶ್ವಾನದಳದ ಜತೆಗೆ ಡ್ರೋನ್‍ಗಳನ್ನು ಬಳಸಲಾಗುವುದು. ಮಾದಕ ವಸ್ತು ಕಳ್ಳಸಾಗಣೆದಾರರ ಮೇಲೆ ನಿಗಾ ಇಡಲು ಮೂರು ಶ್ವಾನದಳ ಬಳಸಿಕೊಳ್ಳಲಾಗುವುದು. ರಾಜ್ಯದ ಕರಾವಳಿ ಪ್ರದೇಶಗಳ ಜೊತೆಗೆ ರೈಲು ನಿಲ್ದಾಣಗಳು, ಬಸ್ ನಿಲ್ದಾಣಗಳು, ಮಾರುಕಟ್ಟೆಗಳು ಮತ್ತು ಇತರ ಜನನಿಬಿಡ ಸ್ಥಳಗಳನ್ನು ನಿಬರ್ಂಧಿಸಿ ಪರಿಶೀಲಿಸಲಾಗುತ್ತದೆ. ಈ ಅವಧಿಯಲ್ಲಿ ಕುಡಿದು ವಾಹನ ಚಲಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ವಿಶೇಷ ಅಭಿಯಾನ ಕೈಗೊಂಡಿದೆ. ಸೂಕ್ತ ಭದ್ರತೆಗಾಗಿ ಭಾರತೀಯ ರಿಸರ್ವ್ ಬೆಟಾಲಿಯನ್ ಮತ್ತು ಇತರ ಇಲಾಖೆಗಳ ಪೆÇಲೀಸರ ಸಹಾಯದಿಂದ ಗೋವಾ ಪೆÇಲೀಸರು ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಈ ಉದ್ದೇಶಕ್ಕಾಗಿ, ನಾಲ್ಕು ಭಾರತೀಯ ರಿಸರ್ವ್ ಬೆಟಾಲಿಯನ್ ತುಕಡಿಗಳು ಇತರ ಸಿಬ್ಬಂದಿಗಳೊಂದಿಗೆ ಸುಮಾರು ಎರಡು ಸಾವಿರ ಪೆÇಲೀಸರು ಮತ್ತು ಇತರ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ, ಅಗ್ನಿಶಾಮಕ ದಳದ ಸಿಬ್ಬಂದಿ, 108 ಜಿವಿಕೆ ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತು ಇತರ ತುರ್ತು ವ್ಯವಸ್ಥೆಗಳ 500 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇದಲ್ಲದೇ ಸಂಚಾರ ವ್ಯವಸ್ಥೆಗೆ ಸಂಚಾರಿ ಪೆÇಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 2 ಪುರುಷರು ಮತ್ತು 2 ಮಹಿಳೆಯರನ್ನು ಒಳಗೊಂಡಿರುವ ಇಂಡಿಯನ್ ರಿಸರ್ವ್ ಬೆಟಾಲಿಯನ್ ನ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಗೋವಾ ಪೆÇಲೀಸ್‍ನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್), ಕ್ಷಿಪ್ರ ಕಾರ್ಯಾಚರಣೆ ಪಡೆ ಪೆÇಲೀಸರು, ಸಂಚಾರ ವಿಭಾಗದ ಪೆÇಲೀಸರು ಮತ್ತು ವಿಶೇಷ ವಿಭಾಗದ ಪೆÇಲೀಸರು ಮತ್ತು ಇತರ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಅಲ್ಲದೆ, ಶಬ್ದ ಮಾಲಿನ್ಯ ನಿಯಮಗಳನ್ನು ಪರೀಕ್ಷಿಸಲು ಗೋವಾ ಮಾಲಿನ್ಯ ನಿಯಂತ್ರಣ ಮಂಡಳಿ ಯಿಂದ ನೈಜ-ಸಮಯದ ಶಬ್ದ ಮಾನಿಟರಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಾಗುತ್ತದೆ. ಇದಲ್ಲದೇ ಎರಡೂ ಜಿಲ್ಲಾಧಿಕಾರಿಗಳು ಕಾನೂನು ಸುವ್ಯವಸ್ಥೆಗೆ ಮ್ಯಾಜಿಸ್ಟ್ರೇಟ್ ವ್ಯವಸ್ಥೆ ಮಾಡಿದ್ದಾರೆ. ಗೋವಾ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೋವಾ ಪೋಲಿಸ್ ಇಲಾಖೆ ಮಾಹಿತಿ ನೀಡಿದೆ.