ಸುದ್ಧಿಕನ್ನಡ ವಾರ್ತೆ
Goa(ಮಡಗಾಂವ): ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಗೋವಾ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಘಟಕ ಹಾಗೂ ದಕ್ಷಿಣ ಗೋವಾ ಜಿಲ್ಲಾ ಮತ್ತು ಸಾಲಸೇಟ್ ತಾಲೂಕಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 5 ರಂದು ಬೆಳಿಗ್ಗೆ 9 ಗಂಟೆಗೆ ಮಡಗಾಂವ ಧವರ್ಲಿಯ ಬಾಬುನಾಯಕ ಹಾಲ್ ನಲ್ಲಿ 3 ನೇಯ ವರ್ಷದ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ-2025 ಆಯೋಜಿಸಲಾಗಿದೆ.
ಬಾಗಲಕೋಟೆಯ ಸಿದ್ಧನಕೊಳ್ಳದ ಡಾ.ಶಿವಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ನಾವೇಲಿ ಶಾಸಕ ಉಲ್ಲಾಸ ತುವೇಕರ್ ಕಾರ್ಯಕ್ರಮದ ಉಧ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ್, ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ಉಪಸ್ಥಿತರಿರುವರು.
ವಿಶೇಷ ಅತಿಥಿಗಳಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಇಂಡೋ ಪೋರ್ಚುಗೀಸ್ ಪ್ರತಿಷ್ಠಾನದ ನಿರ್ದೇಶಕ ಡಾ.ಅರವಿಂದ ಯಾಳಗಿ, ವಿಜಯಪುರ ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಮಾಪ್ಸಾ ಕವಿಶೈಲ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್, ಕಸಾಪ ಪಣಜಿ ತಾಲೂಕಾ ಘಟಕದ ಅಧ್ಯಕ್ಷ ಹನುಮಂತ ಗೊರವರ್, ಧಾರವಾಡದ ಶ್ರೀ ಸಾಯಿ ಪಿ.ಯು ಕಾಲೇಜಿನ ಪ್ರಾಚಾರ್ಯರಾದ ಡಾ.ವೀಣಾ ಬಿರಾದಾರ್, ಧಾರವಾಡ ಪತ್ರಗಾರ ಇಲಾಖೆಯ ಸಹ ನಿರ್ದೇಶಕಿ ಡಾ ಮಂಜುಳಾ ಯಲಿಗಾರ, ಸೆರಾವಲಿಮ್ ಪಂಚಾಯತ ಅಧ್ಯಕ್ಷೆ ಸೀಮಾ ಸಂಕೆ ಉಪಸ್ಥಿತರಿರುವರು.
ಸಭಾ ಕಾರ್ಯಕ್ರಮದ ನಂತರ ರಸಮಂಜರಿ ಕಾರ್ಯಕ್ರಮ, ಮಿಮಿಕ್ರಿ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಈ ಎಲ್ಲ ಕಾರ್ಯಕ್ರಮಗಳಿಗೆ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಗೌರವಾಧ್ಯಕ್ಷ ಪಡದಯ್ಯಸ್ವಾಮಿ ಹಿರೇಮಠ, ಕಸಾಪ ಸಾಲಸೇಟ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.