ಸುದ್ಧಿಕನ್ನಡ ವಾರ್ತೆ
Goa: ಗೋವಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ದಾಮು ನಾಯ್ಕ ಆಯ್ಕೆ ಬಹುತೇಕ ಖಚಿತವಾಗಿದ್ದು, ಜನವರಿ 17 ರಂದು ಅಧೀಕೃತ ಘೋಷಣೆಯಾಗುವ ಸಾಧ್ಯತೆಯಿದೆ.
ದಾಮು ನಾಯ್ಕ ರವರು ಮಡಗಾಣವ ಪಟೊರ್ಡಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದೀಗ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ದಾಮು ನಾಯ್ಕ ಆಯ್ಕೆಯಾಗಲಿದ್ದಾರೆ ಎಂಬ ಸೂಚನೆಯನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಗೋವಾ ಬಿಜೆಪಿ ನಾಯಕರಿಗೆ ನೀಡಿದ್ದಾರೆ.
ಜನವರಿ 17 ರಂದು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಅದೇ ದಿನ ದಾಮು ನಾಯ್ಕ ರವರನ್ನು ಅಧೀಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.