ಸುದ್ಧಿಕನ್ನಡ ವಾರ್ತೆ
Goa : ಗೋವಾ ರಾಜ್ಯ ಬಿಜೆಪಿ ಪ್ರದೇಶಾಧ್ಯಕ್ಷರಾಗಿ ದಾಮು ನಾಯ್ಕ ಶನಿವಾರ ಅಧೀಕೃತವಾಗಿ ಘೋಷಣೆಯಾಗಿದ್ದಾರೆ. ಗೋವಾದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕರ್ತರ ಸಮ್ಮೇಳನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನೀಲ್ ಬನ್ಸಾಲ್ ರವರು ದಾಮು ನಾಯ್ಕ ರವರನ್ನು ನೂತನ ಅಧ್ಯಕ್ಷರನ್ನಾಗಿ ಘೋಷಿಸಿದರು.
ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೇರಿದಂತೆ ಗೋವಾ ರಾಜ್ಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ನೂತನ ಪ್ರದೇಶಾಧ್ಯಕ್ಷರಾಗಿ ಆಯ್ಕೆಯಾದ ದಾಮು ನಾಯ್ಕ ರವರನ್ನು ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿನಂದಿಸಿದರು. ಈ ಬೃಹತ್ ಸಮ್ಮೇಳನದಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.