ಸುದ್ಧಿಕನ್ನಡ ವಾರ್ತೆ
Goa : ಶ್ರೀಸಂಸ್ಥಾನ ಗೌಡಪಾದಾಚಾರ್ಯ ಕವಳೆ ( Goa Kavale Math) ಮಠದ ಹಿರೀಯ ವಕೀಲರಾದ ಮಂದಾ ಲೋಕೆ ರವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಠದ ಶ್ರೀಗಳ ವಿರುದ್ಧ ಮತ್ತು ಇತರರ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.
ಶುಕ್ರವಾರ ಶ್ರೀಸಂಸ್ಥಾನ ಗೌಡಪಾದಾಚಾರ್ಯ ಕವಳೆ ಮಠದ ಹಿರೀಯ ವಕೀಲ ಹಾಗೂ ನ್ಯಾಯವಾಧಿಗಳಾಗಿರುವ ಮಂದಾ ಲೋಕೆ ರವರು ಶ್ರೀಮಠದ ಸ್ವಾಮೀಜಿಗಳ ವಿರುದ್ಧ ಮತ್ತು ಇತರರ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.
ಪ್ರಕರಣ ದಾಖಲಿಸಿದ ಎಲ್ಲಾ ದಾಖಲೆಗಳನ್ನು ಈಗಾಗಲೇ ಅಸಿಂಧು ಎಂದು ಘೋಷಿಸಲಾಗಿದೆ. ಶ್ರೀಮಠದ ಸಮೀತಿಯ ಚುನಾವಣೆ ಸಮೀಪಿಸುತ್ತಿರುವುದರಿಂದ ಚುನಾವಣೆಯ ಮುಂಚಿತವಾಗಿ ಶ್ರೀಮಠಕ್ಕೆ ಕಳಂಕ ತರುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಬೇಕಾದ ಎಲ್ಲ ದಾಖಲೆಗಳು ನಮ್ಮ ಬಳಿ ಇದೆ, ಸುಳ್ಳು ಸುದ್ಧಿ ಹರಡಿಸುವುದು ಇದರ ಮುಖ್ಯ ಉದ್ದೇಶ ಎಂದು ಅವರು ಹೇಳಿದ್ದಾರೆ.
ಗೋವಾದ ಕವಳೆ ಮಠದ ಶಿವಾನಂದ ಸರಸ್ವತಿ ಸ್ವಾಮೀಜಿ ಹಾಗೂ ಇನ್ನಿಬ್ಬರ ವಿರುದ್ಧ ಪೋಂಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಅವರ ಶಿಷ್ಯವೃಂದ ಹಾಗೂ ಅನುಯಾಯಿಗಳಲ್ಲಿ ಆತಂಕ ಮನೆ ಮಾಡಿತ್ತು. ಗೋವಾದ ಪೊಂಡಾ ತಾಲೂಕಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ ವಂಚನೆಯ ಮೂಲಕ ಆಸ್ತಿಯನ್ನು ಮಾರಾಟ ಮಾಡಿದ ಆರೋಪದ ಮೇಲೆ ಪೊಂಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಈ ಎಲ್ಲಾ ಆರೋಪಗಳನ್ನು ಮಠದ ವಕೀಲರು ತಳ್ಳಿಹಾಕಿದ್ದಾರೆ.