ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಜಾಗ ನೋಡಿ ಬಂದಿದ್ದೇವೆ, ಹಾಗಾಗಿ ಗೋವಾದಲ್ಲಿರುವಂತಹ ಕನ್ನಡಿಗರಿಗೆ ಇದು ಉಪಯೋಗವಾಗಲಿದೆ ಎಂದು ಕರ್ನಾಟಕ ರಾಜ್ಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಬಳಿ ಭುವನೇಶ್ವರಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಮಾತನಾಡುತ್ತಿದ್ದರು. ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಕುರಿತ ಸಚಿವರ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ. ಗೋವಾದಲ್ಲಿ ಕಳೆದ ಅನೇಕ ವರ್ಷಗಳ ಕನ್ನಡಿಗರ ಕನಸು ನನಸಾಗಲಿದೆಯೇ ಎಂಬ ನಿರೀಕ್ಷೆಯಲ್ಲಿ ಗೋವಾದ ಕನ್ನಡಿಗರಿದ್ದಾರೆ.