ಸುದ್ಧಿಕನ್ನಡ ವಾರ್ತೆ
Goa : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದ ವಿಜಯ, ಎಎಪಿ ಸೋಲಿಸಿ ಸಂಪೂರ್ಣ ಬಹುಮತ ಗಳಿಸಿದ ಸಾಧನೆಯ ಹಿನ್ನೆಲೆಯಲ್ಲಿ ಗೋವಾದ ಸಾಖಳಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಬಿಜೆಪಿ ರಾಜ್ಯಾಧ್ಯಕ್ಷ ದಾಮು ನಾಯ್ಕ, ಶಸಕ ದಾಜಿ ಸಾಲಕರ್, ಮಾಜಿ ಶಾಸಕ ಸಿದ್ಧಾರ್ಥ ಕುಂಕೋಳಿಕರ್, ಮಹಿಳಾ ಮೋರ್ಚಾ ಪ್ರಮುಖರಾದ ಸುಲಕ್ಷಣಾ ಸಾವಂತ್ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತ ವಿಜಯೋತ್ಸವ ಆಚರಿಸಿದರು.
ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾತನಾಡಿ- 20 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಸರ್ಕಾರ ಬಂದಿದೆ, ಇದಕ್ಕಾಗಿ ದೆಹಲಿಯ ಜನತೆಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೆಹಲಿಯಲ್ಲಿ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಬರಬೇಕು ಎಂಬುದಾಗಿತ್ತು. ಇದೀಗ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆಮ್ ಆದ್ಮಿ ಸರ್ಕಾರ ದೆಹಲಿಯಲ್ಲಿ ಬೃಷ್ಠಾಚಾರ ನಡೆಸಿತ್ತು. ಬೃಷ್ಠಾಚಾರಿಗಳಿಗೆ ಸ್ಥಾನವಿಲ್ಲ ಎಂಬುದನ್ನು ದೆಹಲಿ ಜನತೆ ತೋರಿಸಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.