ಸುದ್ದಿಕನ್ನಡ ವಾರ್ತೆ
Goa : ಗೋವಾದಿಂದ ಬೆಳಗಾವಿ ಸಂಪರ್ಕಿಸುವ ಅನ್ಮೋಡ- ಖಾನಾಪುರ ರಸ್ತೆಯನ್ನು ಮಾರ್ಚ 22 ರವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.ರೈಲ್ವೆ ಅಂಡರ್ ಪಾಸ್ ಸೇತುವೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಅನ್ಮೋಡ- ಖಾನಾಪುರ ರಸ್ತೆಯ ಮಂಟುರಾಗದಲ್ಲಿ ರೈಲ್ವೆ ಅಂಡರ್ ಪಾಸ್ ಸೇರುವೆಯ ಕಾಮಗಾರಿ ನಡೆಯುತ್ತಿರುವುದರಿಂದ ಈ ಮಾರ್ಗವನ್ನು ಬಂದ್ ಮಾಡಲಾಗಿದೆ.
ಗೋವಾದಿಂದ ಬೆಳಗಾವಿ ಭಾಗಕ್ಕೆ ಪ್ರಯಾಣ ಬೆಳೆಸುವವರು ಈ ಮಾರ್ಗವನ್ನೇ ಹೆಚ್ಚಾಗಿ ಬಳಸುತ್ತಿದ್ದುದರಿಂದ ಇದೀಗ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯುಂಟಾಗುವಂತಾಗಿದೆ.