ಸುದ್ಧಿಕನ್ನಡ ವಾರ್ತೆ
Goa: ಗೋವಾದಲ್ಲಿರುವ ಯಕ್ಷಗಾನ ಅಭಿಮಾನಿಗಳಿಗೆ ಶುಭಸುದ್ಧಿ. ಮಾರ್ಚ್ 9 ರಂದು ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಪಣಜಿಯ ಮೆನೆಜಸ್ ಬ್ರಗಾಂಜ ಸಭಾಗೃಹದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ಮಂಡಳಿ(ರಿ) ಹಳುವಳ್ಳಿ ಜಕಳಸ ಮೇಳದಿಂದ “ಸುಧನ್ವಾರ್ಜುನ” ಯಕ್ಷಗಾನ ಪ್ರದರ್ಶನ ಹಾಗೂ ಶ್ರೀ ವೆಂಕಟೇಶ್ವರ ಯಕ್ಷಗಾನ ಕಲಾ ಸಂಘ ಹೊನ್ನವಳ್ಳಿ ಇವರಿಂದ “ಶರಸೇತು ಬಂಧನ” ತಾಳಮದ್ಧಲೆ ಜರುಗಲಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು, ಕರ್ನಾಟಕ ಯಕ್ಷಗಾನ ಅಕಾಡಮಿ ಬೆಂಗಳೂರು ಮತ್ತು ಗೋವಾ ಕನ್ನಡ ಸಮಾಜ ಪಣಜಿ ಇವರ ಸಂಯುಕ್ತ ಆಶ್ರಯದಲ್ಲಿ “ಯಕ್ಷಶರಧಿ” ಕಾರ್ಯಕ್ರಮ ಆಯೋಜಿಸಲಾಗಿದೆ.
ಸಭಾ ಕಾರ್ಯಕ್ರಮ ಮಧ್ಯಾನ್ಹ 2 ಗಂಟೆಯಿಂದ ಆರಂಭಗೊಳ್ಳಲಿದ್ದು ಗೋವಾ ಬಂಟ್ಸ ಸಂಘದ ಕಾರ್ಯದರ್ಶಿ ಸುನೀಲ್ ಶೆಟ್ಟಿ ಕಾರ್ಯಕ್ರಮ ಉಧ್ಘಾಟಿಸಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡಮಿ ಬೆಂಗಳೂರು ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪತ್ರಕರ್ತರು ಹಾಗೂ ಗಾಯಕರೂ ಆದ ಹೆರೂರು ಕೊಪ್ಪದ ಎ.ಜಿ.ಶಿವಾನಂದ ಭಟ್ ಉಪಸ್ಥಿತರಿರುವರು. ಗೌರವ ಅತಿಥಿಗಳಾಗಿ ಗೋವಾ ವಿಶ್ವವಿದ್ಯಾಲಯದ ಹಿರೀಯ ಪ್ರಾಧ್ಯಾಪಕ ಡಾ.ಗಣೇಶ್ ಸೋಮಯಾಜಿ ಉಪಸ್ಥಿತರಿರುವರು.
ಈ ಎಲ್ಲ ಕಾರ್ಯಕ್ರಮಗಳಿಗೆ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವಂತೆ ಕರ್ನಾಟಕ ಯಕ್ಷಗಾನ ಅಕಾಡಮಿಯ ರಿಜಿಸ್ಟ್ರಾರ್ ನಮ್ರತಾ.ಎನ್, ಕರ್ನಾಟಕ ಯಕ್ಷಗಾನ ಅಕಾಡಮಿಯ ಸದಸ್ಯ ಸಂಚಾಲಕ ಕೊಪ್ಪಲ ಮೋಹನ ಕದ್ರಿ, ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣಕುಮಾರ್, ಕಾರ್ಯದರ್ಶಿ ಶ್ರೀಕಾಂತ ಲೋಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿ .ಸೂ: ಕಾರ್ಯಕ್ರಮದಂದು ಬೆಳಗಿನ ಉಪಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಇರುತ್ತದೆ.