ಸುದ್ದಿಕನ್ನಡ ವಾರ್ತೆ
Goa : ಗೋವಾದಲ್ಲಿ ನೇಮಕಾತಿ ಜಾಹೀರಾತು ನೀಡದಿದ್ದರೆ ಅಥವಾ ಉದ್ಯೋಗ ವಿನಿಮಯ ಕೇಂದ್ರಕ್ಕೆ ಮಾಹಿತಿ ನೀಡದಿದ್ದರೆ ರಾಜ್ಯದ ಖಾಸಗಿ ಕಂಪನಿಗಳಿಗೆ 5,000 ರಿಂದ 30,000 ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ. ಈ ಸಂಬಂಧ ಕಾನೂನಿಗೆ ತಿದ್ದುಪಡಿ ತರಲು ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಸಂಪುಟ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಈ ಮಾಹಿತಿ ನೀಡಿದ್ದಾರೆ. ಕಂಪನಿಯಲ್ಲಿರುವ ಉದ್ಯೋಗಿಗಳ ಸಂಖ್ಯೆಗೆ ಅನುಗುಣವಾಗಿ ದಂಡ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಖಾಸಗಿ ಕಂಪನಿಗಳು ಗೋವಾದಲ್ಲಿ ನೇಮಕಾತಿ ಮಾಡಿಕೊಳ್ಳಲು ಹೋದರೆ, ಅವರು ಅದನ್ನು ಸ್ಥಳೀಯ ಪತ್ರಿಕೆಗಳಲ್ಲಿ ಜಾಹೀರಾತು ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು. ಅವರು ಉದ್ಯೋಗ ವಿನಿಮಯ ಕೇಂದ್ರಕ್ಕೆ ನೇಮಕಾತಿ ಮಾಹಿತಿಯನ್ನು ಒದಗಿಸಬೇಕಾಗುತ್ತದೆ. ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಸಾಧ್ಯವಾದಷ್ಟು ಉದ್ಯೋಗಗಳು ಲಭ್ಯವಾಗುವಂತೆ ನಾವು ಪ್ರಯತ್ನಿಸುತ್ತಿದ್ದೇವೆ. ಇದಕ್ಕಾಗಿ ಒಂದು ವ್ಯವಸ್ಥೆಯನ್ನು ಉದ್ಯೋಗ ಇಲಾಖೆ ಶೀಘ್ರದಲ್ಲೇ ಅಭಿವೃದ್ಧಿಪಡಿಸಲಿದೆ. ಇದಲ್ಲದೆ, ಖಾಸಗಿ ಕಂಪನಿಗಳ ನೇಮಕಾತಿಯನ್ನು ಕಾಲಕಾಲಕ್ಕೆ ಮೇಲ್ವಿಚಾರಣೆ ಮಾಡಲು ಉದ್ಯೋಗ ನಿರೀಕ್ಷಕರಿಗೆ ಸೂಚನೆ ನೀಡಲಾಗಿದೆ.

ಪಶುಪಾಲನಾ ಇಲಾಖೆಯಲ್ಲಿ 24 ಸಹಾಯಕ ಪಶುಪಾಲನಾ ಅಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಿಎಂ ಸಾವಂತ್ ಹೇಳಿದರು. ಕೋವಿಡ್ ಅವಧಿಯಲ್ಲಿ ಉತ್ತರ ಗೋವಾ ಜಿಲ್ಲಾ ಕಲೆಕ್ಟರೇಟ್ ಮಾಡಿದ 15.23 ಲಕ್ಷ ರೂ.ಗಳ ವೆಚ್ಚವನ್ನು ಅನುಮೋದಿಸಲಾಯಿತು. ಗೋವಾ ಆಧ್ಯಾತ್ಮಿಕ ಉತ್ಸವವನ್ನು ಆಯೋಜಿಸಲು ತಪೆÇೀಭೂಮಿಯಲ್ಲಿರುವ ಸದ್ಗುರು ಪ್ರತಿಷ್ಠಾನಕ್ಕೆ 1.5 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಕಲೆ ಮತ್ತು ಸಂಸ್ಕøತಿ ಇಲಾಖೆ ಆಯೋಜಿಸಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.