ಸುದ್ದಿಕನ್ನಡ ವಾರ್ತೆ
Goa: ಕರ್ನಾಟಕದ ಹೊಸಪೇಟೆಯಿಂದ ಗೋವಾದ ಅಮೋಣಾಕ್ಕೆ ಖನಿಜವನ್ನು ತುಂಬಿಕೊಂಡು ಬರುತ್ತಿದ್ದ ಟ್ರಕ್ ಮೋಲೆಮ್ ಚಂದ್ರಣದಲ್ಲಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಟ್ರಕ್ ಟಾಯರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕವಾಗಿ ಮಾಹಿತಿ ಲಭ್ಯವಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಅಗ್ನಿ ಅವಘಡದಲ್ಲಿ ಸುಮಾರು 70 ಲಕ್ಷ ರೂ ಹಾನಿಯಾಗಿರಬಹುದೆಂದು ಅಂದಾಜಿಸಲಾಗಿದೆ.

ಪೋಲಿಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಧಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆಯ ಮೂಲಕ ಬೆಂಕಿ ನಂದಿಸಲಾಗಿದೆ.