ಸುದ್ಧಿಕನ್ನಡ ವಾರ್ತೆ
Goa (ಮಡಗಾಂವ್): ಗೋವಾದಲ್ಲಿ ಕಟ್ಟಡವೊಂದರ ಪ್ಲಾಸ್ಟರ್ ಮಾಡುವ ಸಂದರ್ಭದಲ್ಲಿ ಎತ್ತರದಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದ ಕರ್ನಾಟಕ ಮೂಲದ ಕಾರ್ಮಿಕ ಸಾವನ್ನಪ್ಪಿದ ಘಟನೆ ಗೋವಾದಲ್ಲಿ ನಡೆದಿದೆ.

ಗೋವಾದ ಮಾಡೆಲ್‍ನಲ್ಲಿ ನಿರ್ಮಾಣ ಹಂತದ ಕಟ್ಟಡದ ಗೋಡೆಗೆ ಪ್ಲಾಸ್ಟರ್ ಮಾಡುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕ ರಮೇಶ್ ಕೆರಿಮಟ್ಟಿಹಳ್ಳಿ ಎತ್ತರದಿಂದ ಬಿದ್ದಿದ್ದಾರೆ. ಗಾಯಗೊಂಡ ರಮೇಶ್ ರವರನ್ನು ಗೋವಾ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ. ಫಟೋರ್ಡಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಮೇಶ್ ಕೆರಿಮಟ್ಟಿಹಳ್ಳಿ (ಕರ್ನಾಟಕದ ಹಾವೇರಿ ಮೂಲದವರು) ಮಾಡಲ್ ಫತೋರ್ಡಾದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಗೋಡೆಗಳಿಗೆ ಪ್ಲಾಸ್ಟರ್ ಮಾಡುತ್ತಿದ್ದರು. ಗುರುವಾರ ಸಂಜೆ 4.30ರ ವೇಳೆ ಎತ್ತರದ ಗೋಡೆಗೆ ಪ್ಲಾಸ್ಟರ್ ಮಾಡುತ್ತಿದ್ದ ಸಂದರ್ಭದಲ್ಲಿ ರಮೇಶ್ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಇದರಿಂದ ರಮೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ಗೋವಾ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಬಾಂಬೋಲಿಂ ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾನ್ಹ ಮೃತಪಟ್ಟಿದ್ದಾರೆ. ಫತೋರ್ಡಾ ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

                        ಗೋವಾದಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕರ್ನಾಟಕ ಕಾರ್ಮಿಕರು...
ಗೋವಾ ರಾಜ್ಯವು ಅಗತ್ಯ ವಸ್ತುಗಳಿಗೆ ಮಾತ್ರವಲ್ಲದೆಯೇ ಕಟ್ಟಡ ನಿರ್ಮಾಣ ಕಾರ್ಯ ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ ಪ್ರಮುಖವಾಗಿ ಕರ್ನಾಟಕವನ್ನೇ ಅವಲಂಭಿಸಿದೆ. ಗೋವಾದಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಪ್ರಮುಖವಾಗಿ ಕರ್ನಾಟಕದ ಕಾರ್ಮಿಕರೇ ಕೆಲಸ ನಿರ್ವಹಿಸುತ್ತಾರೆ ಎಂಬುದು ಗಮನಿಸಬೇಕಾದ ಪ್ರಮುಖ ಅಂಶವಾಗಿದೆ.