ಸುದ್ದಿಕನ್ನಡ ವಾರ್ತೆ
Goa : ಗೋವಾದ ಶಿರಗಾಂವನ ಶ್ರೀ ಲಯಿರಾಯಿ ದೇವಿ ಜಾತ್ರೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋಗಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಗೋಮೆಕೊದ ವೈದ್ಯರು ಮಾಹಿತಿ ನೀಡಿದ್ದಾರೆ.

ಪ್ರಸ್ತುತ, 15 ಗಾಯಾಳುಗಳು ಗೋಮೆಕೊದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಈ ಹಿಂದೆ ಚಿಕಿತ್ಸೆ ಪಡೆಯುತ್ತಿದ್ದ 21 ಗಾಯಾಳುಗಳಲ್ಲಿ 6 ಜನರನ್ನು ಡಿಶ್ಚಾರ್ಜ ಮಾಡಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ 4 ರೋಗಿಗಳಲ್ಲಿ 3 ಜನರ ಸ್ಥಿತಿ ಸುಧಾರಿಸುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

 

ಶನಿವಾರ ಬೆಳಿಗ್ಗೆ ಶಿರಗಾಂವನಲ್ಲಿ ನಡೆದ ಲಯಿರಾಯಿ ದೇವಿ ಜಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಜನರು ಸಾವನ್ನಪ್ಪಿ, 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸಾಖಳಿ, ಡಿಚೋಲಿ, ಮಾಪುಸಾ ಮತ್ತು ಗೋಮೆಕೊದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತರ ಆಸ್ಪತ್ರೆಯಲ್ಲಿದ್ದ ಹೆಚ್ಚಿನ ಗಂಭೀರ ರೋಗಿಗಳನ್ನು ಗೋಮೆಕೊಗೆ ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.