ಸುದ್ದಿಕನ್ನಡ ವಾರ್ತೆ
Goa : ಗೋವಾ ರಾಜ್ಯಾದ್ಯಂತ ಮಂಗಳವಾರ ಮೇ 20 ರ ಬೆಳಿಗ್ಗೆಯಿಂದ ಮಳೆ ಆರಂಭಗೊಂಡಿದ್ದು, ಹವಾಮಾನ ಇಲಾಖೆಯು ಮೇ 23 ರ ವರೆಗೆ ಆರೆಂಜ್ ಅಲರ್ಟ ಜಾರಿಗೊಳಿಸಿದೆ. ಗೋವಾದಲ್ಲಿ 40 ರಿಂದ 50 ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅಂಡಮಾನ ಮತ್ತು ಬಂಗಾಳಕೊಲಿಯಲ್ಲಿ ಶಕ್ತಿ ಚಂಡಮಾರುತ ಪರಿಣಾಮ ದೇಶದ ಬಹುತೇಕ ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವಂತೆ ಮಾಡಿದೆ. ಕೆಲ ರಾಜ್ಯಗಳಲ್ಲಂತೂ ಮಳೆಯ ಆರ್ಭಟ ಮುಂದುವರೆದಿದೆ. ಮುಂದಿನ ಐದಾರು ದಿನಗಳ ಕಾಲ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ಆಂಧ್ರಪ್ರದೇಶ, ಗೋವಾ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.