ಸುದ್ದಿಕನ್ನಡ ವಾರ್ತೆ
Goa : ಗೋವಾದ ಮಾಂಡವಿ ನದಿಯಲ್ಲಿ ಪ್ರವಾಸಿ ಬೋಟ್ ನಲ್ಲಿ ಅಗ್ನಿ ಅವಘಡ ನಡೆದಿದೆ. ಈ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಬಿಟ್ಟೋಣ ಜೆಟ್ಟಿಯ ಎಂವಿ-ಕೆಕಟ್ ಎಂಬ ಪ್ರವಾಸಿ ಬೋಟ್ ನಲ್ಲಿ ಈ ಘಟನೆ ಸಂಭವಿಸಿದೆ. ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಬೋಟ್ ನಲ್ಲಿ ಯಾವುದೇ ಪ್ರವಾಸಿಗರು ಮತ್ತು ಕರ್ಮಚಾರಿಗಳು ಇರಲಿಲ್ಲ ಎನ್ನಲಾಗಿದೆ. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಲಭ್ಯವಾಗಿರುವ ಮಾಹಿತಿಯ ಅನುಸಾರ- ಬಿಟ್ಟೋಣ ಜೆಟ್ಟಿಯಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಭಾರಿ ಗಾಳಿಯಿಂದಾಗಿ ಬೆಂಕಿ ಇನ್ನಷ್ಟು ಆವರಿಸಿಕೊಂಡಿದೆ. ಬಂದರು ಇಲಾಖೆಯ ಕರ್ಮಚಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಧಿಗಳು ಕಾರ್ಯಾಚರಣೆ ನಡೆಸಿ ಬೋಟ್ ಗೆ ಹತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಘಟನೆ ಸಂಭವಿಸಲು ನಿಖರ ಕಾರಣ ತಿಳಿದು ಬಂದಿಲ್ಲ. ಪೋಲಿಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.