ಸುದ್ದಿಕನ್ನಡ ವಾರ್ತೆ
Goa : ಗೋವಾ ರಾಜ್ಯ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಜಲಪಾತಗಳು ಮಳೆಗಾಲದ ಪ್ರವಾಸೋದ್ಯಮದ ಭಾಗವಾಗಿರುವುದರಿಂದ ಪ್ರವಾಸಿಗರಿಗೆ ಮುಕ್ತವಾಗಿರುತ್ತವೆ. ಅರಣ್ಯ ಇಲಾಖೆ ಮತ್ತು ಅರಣ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿರುವ ಜಲಪಾತಗಳಿಗೆ ನಿಷೇಧದ ಆದೇಶ ಅನ್ವಯಿಸುವುದಿಲ್ಲ ಎಂದು ಗೋವಾ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಾಸಕಿ ದಿವ್ಯಾ ರಾಣೆ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಮತ್ತು ಅರಣ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿರುವ ಜಲಪಾತಗಳು ಮಳೆಗಾಲದಲ್ಲಿ ಪ್ರವಾಸೋದ್ಯಮಕ್ಕೆ ಮುಕ್ತವಾಗಿರುತ್ತವೆ. ಜಿಲ್ಲಾಧಿಕಾರಿಗಳು ವಿಧಿಸಿರುವ ನಿಷೇಧವು ಅರಣ್ಯ ಇಲಾಖೆ ಮತ್ತು ಅರಣ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿರುವ ಜಲಪಾತಗಳಿಗೆ ಅನ್ವಯಿಸುವುದಿಲ್ಲ ಎಂದು ಅಧ್ಯಕ್ಷೆ ಶಾಸಕಿ ದಿವ್ಯಾ ರಾಣೆ ಹೇಳಿದ್ದಾರೆ. ಪ್ರವಾಸಿಗರಿಗೆ ‘ಲೈಫ್ ಜಾಕೆಟ್‍ಗಳು’ ಮತ್ತು ಇತರ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ನಿರ್ದಿಷ್ಟ ದ್ವಾರಗಳ ಮೂಲಕ ಪ್ರವೇಶವನ್ನು ಅನುಮತಿಸಲಾಗುವುದು. ಜಲಪಾತಗಳಿಗೆ ಪ್ರವೇಶದ ಜೊತೆಗೆ, ಟ್ರ್ಯಾಕಿಂಗ್ ಸಹ ಮುಂದುವರಿಯುತ್ತದೆ ಎಂದು ದಿವ್ಯಾ ರಾಣೆ ಸ್ಪಷ್ಟಪಡಿಸಿದ್ದಾರೆ.