ಸುದ್ಧಿಕನ್ನಡ ವಾರ್ತೆ
ಪಣಜಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜೂನ್ 22 ರಂದು ಭಾನುವಾರ ಮಧ್ಯಾನ್ಹ 3 ಗಂಟೆಗೆ ಪಣಜಿಯ ಮೆನೆಜಸ್ ಬ್ರಗಾಂಜ ಸಭಾಗೃಹದಲ್ಲಿ ಆಯೋಜಿಸಲಾಗಿದೆ.
ಈ ಸಮಾರಂಭವನ್ನು ಭಾರತದ ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀಪಾದ ನಾಯ್ಕ ಉಧ್ಘಾಟಿಸಲಿದ್ದಾರೆ. ಪರ್ವರಿಯ ಶ್ರೀ ಸಿದ್ಧಾರೂಢ ಮಠದ ಶ್ರೀ ಗಣೇಶಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಅಧ್ಯಕ್ಷ ಗಣೇಶ ಶೆಟ್ಟಿ ಇರ್ವತ್ತೂರು ರವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗೋವಾ ರಾಜ್ಯ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ, ಗೋವಾ ವಿಧಾನಸಭೆಯ ಮಾಜಿ ಕಾರ್ಯದರ್ಶಿ ಹಾಗೂ ಕರ್ನಾಟಕ ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಟಿ.ಎನ್.ಧ್ರುವಕುಮಾರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಸ್ಥಾಪಕಾಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲ ರವರು ಉಪಸ್ಥಿತರಿರುವರು.
ಗೌರವ ಉಪಸ್ಥಿತಿಯಾಗಿ ಕಂಬಳ ಸಮೀತಿಯ ಮಾಜಿ ಅಧ್ಯಕ್ಷ ಸದಾನಂದ ಶೆಟ್ಟಿ ಬೆಳುವಾಯಿ, ಗೋವಾ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ ಅಮಿನ್ ಬಂಟ್ವಾಳ, ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಗೌರವಾಧ್ಯಕ್ಷ ವಿಜಯೇಂದ್ರ ಶೆಟ್ಟಿ, ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣಕುಮಾರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಪಳ್ಳಿ ಅಧ್ಯಕ್ಷ ಸುನೀಲ್ ಶೆಟ್ಟಿ ಪಳ್ಳಿ, ಉದ್ಯಮಿ ಭರತ್ ಹೆಗ್ಡೆ, ಗೋವಾ ಬಂಟರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ, ಗೋವಾ ಶ್ರೀ ನಾರಾಯಣ ಗುರು ಟ್ರಸ್ಟ ಅಧ್ಯಕ್ಷ ಪ್ರಕಾಶ ಪೂಜಾರಿ, ಮ್ಯಾಥ್ಯೂಸ್ ಗ್ರುಪ್ ಗೋವಾ ಸಿ.ಇ.ಒ ಮಲ್ಲಿಕಾರ್ಜುನ ಬದಾಮಿ, ಗೋವಾ ಯಕ್ಷಕಲಾ ಮಿತ್ರಕೂಟ ಅಧ್ಯಕ್ಷ ವಿನಾಯಕ ಅವಧಾನಿ, ಗೋವಾ ಬಿಲ್ಲವ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ, ಗೋವಾ ಬಂಟರ ಸಂಘದ ಮಾಜಿ ಅಧ್ಯಕ್ಷ ಶಶಿಧರ ನಾಯ್ಕ, ಗೋವಾ ಯಕ್ಷಧ್ರುವ ಪಟ್ಲ ಫೌಂಡೇಶನ್ ಉಪಾಧ್ಯಕ್ಷ ಪ್ರಶಾಂತ ಜೈನ್(ಸಿ.ಎ), ಗೋವಾ ಸರ್ಕಾರದಿಂದ ಅತ್ಯುತ್ತಮ ಸಾಮಾಜಿಕ ಸೇವಾ ಪುರಸ್ಕøತರಾದ ಅಶೋಕ ಶೆಟ್ಟಿ, ಗೋವಾ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿ ರಾಘವೇಂದ್ರ ಉಡುಪ, ಗೋವಾ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೋಶಾಧಿಕಾರಿ ಮೋಹನದಾಸ್ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಉಪಾಧ್ಯಕ್ಷ ಜಗದೀಶ ಶೆಟ್ಟಿ ಪಳ್ಳಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಉಪಾಧ್ಯಕ್ಷ ಅನೀಲ್ ವಿ. ಪೂಜಾರಿ, ಗೋವಾ ತುಳು ಕೂಟದ ಉಪಾಧ್ಯಕ್ಷ ಶಶಿಧರ್ ರೈ, ಗೋವಾ ಸಂಸ್ಕøತ ವಿದ್ವಾನ್ ಮತ್ತು ಯಕ್ಷಗಾನ ಅರ್ಥಧಾರಿಗಳಾದ ಮಹಾಬಲ ಭಟ್ ರವರು ಉಪಸ್ಥಿತರಿರುವರು. ಅಂತರಾಷ್ಟ್ರೀಯ ನಿರೂಪಕರಾದ ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.