ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ತೀವ್ರತೆ ಹೆಚ್ಚಾಗಿದೆ. ಸೋಮವಾರ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಹಲವೆಡೆ ರಸ್ತೆಗಳು ಕೂಡ ಜಲಾವೃತಗೊಂಡ ಘಟನೆ ನಡೆದಿದೆ.
ಗೋವಾದಲ್ಲಿ ಮಂಗಳವಾರ ಮಳೆದ ತೀವ್ರತೆ ಕೊಂಚ ಕಡಿಮೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ವ್ಯಕ್ತಪಡಿಸಿದೆ. ಮಂಗಳವಾರ ಮಧ್ಯಮ ಸ್ವರೂಪದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಯಲ್ಲೊ ಅಲರ್ಟ ಜಾರಿಗೊಳಿಸಿದೆ.
ಮಹಾರಾಷ್ಟ್ರದಲ್ಲಿ ರಣಭೀಕರ ಮಳೆ…!
ಮುಂಬಯಿ ಸೇರಿದಂತೆ ಮಹಾರಾಷ್ಟ್ರ ರಾಜ್ಯಾದ್ಯಂತ ಸೋಮವಾರ ಭಾರಿ ಮಳೆಯಾಗಿದೆ. ಇದರ ಪರಿಣಾಮ ಮಹಾರಾಷ್ಟ್ರದ ಆರ್ಥಿಕ ರಾಜಧಾನಿ ಬಹುತೇಕ ಭಾಗ ಜಲಾವೃತಗೊಂಡಿದೆ. ಮಹಾರಾಷ್ಟ್ರದ ಮರಾಠಾವಾಡಾ, ವಿದರ್ಭ, ಖಾನದೇಶ, ಪಶ್ಚಿಮ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಇದೇ ರೀತಿ ಅತಿವೃಷ್ಠಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳವಾರವೂ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆಗೆ ಮಹಾರಾಷ್ಟ್ರದಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ನಾಂದೇಡ ಜಿಲ್ಲೆಯ ಮುಖೇಡ್ ಎಂಬಲ್ಲಿ ಭಾರಿ ಮಳೆಯಿಂದಾಗಿ ಆತಂಕ ಸ್ಥಿತಿ ನಿರ್ಮಾಣವಾಗಿರುವುದರಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಸಲು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.