ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದಲ್ಲಿ ಕಳೆದ ಕೆಲ ದಿನಗಳಿಂದ ವಿಶ್ರಾಂತಿ ಪಡೆದಿದ್ದ ಮಳೆ ಇದೀಗ ಮತ್ತೆ ಆರಂಭಗೊಳ್ಳಲಿದೆ. ಗೋವಾ ರಾಜ್ಯದಲ್ಲಿ ಮತ್ತೆ ಮಳೆ ಆಗಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಯಲ್ಲಿ ಗೋವಾ ರಾಜ್ಯದಲ್ಲಿ ಸರಾಸರಿ 0.7 ಮಿಲಿ ಮೀಟರ್ ಮಳೆ ದಾಖಲಾಗಿದೆ. ಗೋವಾದ ಸಾಕಳಿ ಮುರ್ಗಾವ್ ಮಾಪ್ಸ ಈ ಭಾಗದಲ್ಲಿ ಮಳೆಯಾಗಿದೆ.

ಗೋವಾ ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮೀನುಗಾರರು ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಷ್ಟೇ ಅಲ್ಲದೆ ಗೋವಾ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರು ಬೀಚ್ ಗಳಲ್ಲಿ ನೀರಿಗೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.