ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ತಿವಿಮ್ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯ ಗುರುತು ಇದುವರೆಗೂ ಪತ್ತೆಯಾಗಿಲ್ಲ ಎನ್ನಲಾಗಿದ್ದು ಕೊಂಕಣ ರೈಲ್ವೆ ಪೆÇಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಗೋವಾದ ತಿವಿಮ್ ರೈಲ್ವೆ ಸ್ಟೇಷನ್ ಬಳಿಯ ರೈಲ್ವೆ ಟ್ರ್ಯಾಕ್ ಮೇಲೆ ಈ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿಯ ವಯಸ್ಸು 35 ರಿಂದ 40 ಎಂದು ಪೆÇಲೀಸರು ಅಂದಾಜಿಸಿದ್ದಾರೆ. ಆದರೆ ಈ ವ್ಯಕ್ತಿ ಸ್ಥಳೀಯರು ಅಥವಾ ಹೊರರಾಜ್ಯದವರು ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ರೈಲ್ವೆ ಹಳಿಯನ್ನು ದಾಟುತ್ತಿದ್ದ ಸಂದರ್ಭದಲ್ಲಿ ಅಥವಾ ರೈಲ್ವೆ ಹಳಿಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬರುತ್ತಿದ್ದ ರೈಲ್ವೆ ಡಿಕ್ಕಿ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ರೈಲ್ವೆ ರಬಸದಿಂದ ಡಿಕ್ಕಿ ಹೊಡೆದಿದ್ದರಿಂದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಕೊಂಕಣ ರೈಲ್ವೆ ಪೆÇಲೀಸರು ಕೂಡಲೇ ಘಟನಾ ಸ್ಥಳಕ್ಕೆ ದಾಖಲಾಗಿದ್ದಾರೆ. ಅವರು ಮೃತದೇಹದ ಪಂಚನಾಮಿ ನಡೆಸಿ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಈ ಮೃತ ವ್ಯಕ್ತಿಯ ಗುರುತು ಪತ್ತೆಯಾಗುವವರೆಗೆ ಹಾಗೂ ಎಲ್ಲ ರೀತಿಯ ಕಾಯ್ದೆಯ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮೃತದೇಹವನ್ನು ಗೋವಾ ವೈದ್ಯಕೀಯ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ ಎಂದು ಪೆÇಲೀಸರು ಮಾಹಿತಿ ನೀಡಿದ್ದಾರೆ.