ಸುದ್ದಿ ಕನ್ನಡ ವಾರ್ತೆ

ಧಾರವಾಡ: ಕಲಾಸಂಘಮ ಸಂಸ್ಥೆ ಧಾರವಾಡ ಇದರ ಹದಿನಾರನೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕದ ಗೌರವ ಕಾರ್ಯದರ್ಶಿ ನಾಗರಾಜ ಗೋಂದಕರ ಹಾಗೂ ಬಾಬು ಬಾಗೆವಾಡಿ ರವರಿಗೆ ಕನ್ನಡಿಗರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಲಾಸಂಘಮ ಸಂಸ್ಥೆಯ ಗೌರವಾಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಅಧ್ಯಕ್ಷ ಸಿದ್ದಣ್ಣ ಮೇಟಿ, ಕಲಾಸಂಘಮ ಸಂಸ್ಥೆಯ ಅಧ್ಯಕ್ಷ ಪ್ರಭು ಹಂಚಿನಾಳ ಹಾಗೂ ಬಸವರಾಜ್ ಮೇಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಾಧನೆಗೈದ ಕನ್ನಡಿಗರನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಯಿತು