ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ಕಾಣಕೋಣದಲ್ಲಿರುವ ಶ್ರೀ ಗೋಕರ್ಣ ಪರ್ತಗಾಳಿ ಮಠದ ಪಂಚಶತಾಬ್ದಿ ವರ್ಷದ 550 ನೇಯ ವರ್ಧಂತಿ ಉತ್ಸವವನ್ನು ಆಯೋಜಿಸಲಾಗಿದ್ದು ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿಯವರು ಮಠಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಶನಿವಾರ ಪರ್ತಗಾಳಿ ಮಠಕ್ಕೆ ತೆರಳಿ ಶ್ರೀಗಳ ದರ್ಶನ ಪಡೆದು ಸಿದ್ಧತಾ ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾತನಾಡಿ- ಕಾರ್ಯಕ್ರಮದ ಸಿದ್ಧತಾ ಕಾರ್ಯ ಪರಿಶೀಲಿಸಲು ನವೆಂಬರ್ 25 ರಂದು ಮಠಕ್ಕೆ ಆಗಮಿಸುತ್ತೇನೆ ಎಂದರು.

ನವೆಂಬರ್ 28 ರಂದು ಪರ್ತಗಾಳಿ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ರವರು 77 ಅಡಿ ಎತ್ತರದ ಶ್ರೀರಾಮನ ಮೂರ್ತಿಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಹಿರೀಯ ಅಧಿಕಾರಿಗಳು ಶನಿವಾರ ಮಠಕ್ಕೆ ಭೇಟಿ ನೀಡಿ ಸುರಕ್ಷಾ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ವಿ ಕಂದವೇಲು, ಪೋಲಿಸ್ ಮಹಾಸಂಚಾಲಕ ಅಲೋಕಕುಮಾರ್, ದಕ್ಷಿಣ ಗೋವಾ ಜಿಲ್ಲಾಧಿಕಾರಿ ಎಗ್ನಾ ಕ್ಲಿಟ್ಸ, ಸೇರಿದಂತೆ ಹಿರೀಯ ಅಧಿಕಾರಿಗಳು ಮಠಕ್ಕೆ ಆಗಮಿಸಿ ಚರ್ಚೆ ನಡೆಸಿದರು.