ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾ ಗಡಿ ಕನ್ನಡಿಗರ ಸಮಸ್ಯೆಗಳ ಕುರಿತು ಚರ್ಚಿಸಲು ಸಮಾಲೋಚನಾ ಸಭೆಯನ್ನು ನವೆಂಬರ್ 25 ರಂದು ಮಂಗಳವಾದ ಬೆಳಿಗ್ಗೆ 11.30 ಕ್ಕೆ ಜುವಾರಿನಗರ ಝರಿಯ ಶ್ರೀಯಲ್ಲಾಲಿಂಗೇಶ್ವರ ಮಠದಲ್ಲಿ ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಧಿಕಾರದ ಕಾರ್ಯದರ್ಶಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.
ಈ ಸಭೆಗೆ ಗೋವಾದಲ್ಲಿರುವ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ. ಈ ಹಿಂದೆ ನಿಗಧಿ ಪಡಿಸಿದ್ದ ಸಭೆಯ ದಿನಾಂಕವನ್ನು ಮುಂದೂಡಿ ದಿನಾಂಕ,ಸಮಯ ಬದಲಾವಣೆ ಮಾಡಲಾಗಿದೆ ಎಂದು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
