ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ಪೈಂಣಿಯಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉತ್ತರಕರ್ನಾಟಕದ ನಿಂಗಪ್ಪ ಭೋವಿವಡ್ಡರ್ ಎಂಬ 28 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗೋವಾದ ಕಾಣಕೋಣದ ಮನೋಹರ್ ಪರೀಕರ್ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಸ್ವಯಂ ಅಪೊಘಾತದಲ್ಲಿ ಈತ ಸಾವನ್ನಪ್ಪಿದ್ದಾನೆ.

ಲಭ್ಯವಾಗಿರುವ ಮಾಹಿತಿಯ ಅನುಸಾರ- ಈತ ದ್ವಿಚಕ್ರ ವಾಹನದಲ್ಲಿ ಬರುತ್ತಿರುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಅಒಪಘಾತ ಸಂಭವಿಸಿದೆ. ಈ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಅಪಘಾತ ಸಂಭವಿಸಿದ ಸ್ಥಳದಿಂದ ಬೈಕ್ ಸುಮಾರು 10 ಮೀಟರ್ ಮುಂದೆ ಹೋಗಿ ಬಿದ್ದಿದೆ. ಈ ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಘಟನೆಗೆ ಸಂಬಂಧಿಸಿದಂತೆ ಕಾಣಕೋಣ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು ಪೋಲಿಸ್ ಉಪ ಅಧೀಕ್ಷಕ ನಿಲೇಶ್ ರಾಣೆ ರವರ ಮಾರ್ಗದರ್ಶನದಲ್ಲಿ ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.