ಸುದ್ಧಿಕನ್ನಡ ವಾರ್ತೆ
ಪಣಜಿ(ವಾಸ್ಕೊ): ಮಹಾಶಿವರಾತ್ರಿಯ ಪ್ರಯುಕ್ತ ವಾಸ್ಕೊ ಮಂಗೋರಹಿಲ್ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಹಾಶಿವರಾತ್ರಿಯ ಪ್ರಯುಕ್ತ ಭಾನುವಾರ ಬೆಳಿಗ್ಗೆ 5 ಗಂಟೆಗೆ ಮಹಾರುದ್ರಾಭಿಷೇಕ, ಸಂಜೆ 6.30 ರಿಂದ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ, ರಾತ್ರಿ 10.30 ಕ್ಕೆ ಭಜನಾ ಕಾರ್ಯಕ್ರಮ ನಡೆಯಲಿದೆ. ಫೆ.16 ಸೋಮವಾರ ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ಮಹಾರುದ್ರಾಭಿಷೇಕ, ಬೆಳಿಗ್ಗೆ 9 ಗಂಟೆಗೆ ರಥದ ಹೋಮ ನಡೆಯಲಿದೆ. ಮಧ್ಯಾನ್ಹ 1 ಗಂಟೆಯಿಂದ ಮಹಾಪ್ರಸಾದ, 4 ಗಂಟೆಗೆ ಶ್ರೀ ಸಿದ್ದಲಿಂಗೇಶ್ವರ ಮಠದಿಂದ ಕಳಸದೊಂದಿದೆಹಾಗೂ ಡೊಳ್ಳು ಮಂಜಲದೊಂದಿಗೆ ಮಲ್ಲಿಕಾರ್ಜುನ ಮೂರ್ತಿ ಹೊತ್ತ ಪಲ್ಲಕ್ಕಿ ಮೆರವಣಿಗೆ, ಸಂಜೆ 5 .30 ರಿಂದ ರಥೋತ್ಸವ ನಡೆಯಲಿದೆ.
ಈ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
