ಸುದ್ಧಿಕನ್ನಡ ವಾರ್ತೆ
ಬೆಳಗಾವಿ: ಖಾನಾಪುರ ತಾಲೂಕಿನ ಹುಲಂದ್ ಗ್ರಾಮದಲ್ಲಿ ದನ ಮೇಯಿಸಲು ಕಾಡಿಗೆ ಹೋಗಿದ್ದ ವಾಸುದೇವ್ ನಾರಾಯಣ್ ಗಾವ್ಡೆ ಮೇಲೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಕರಡಿಯೊಂದು ದಾಳಿ ನಡೆಸಿದೆ. ಕರಡಿ ದಾಳಿಯಿಂದ ಗಾವ್ಡೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಂಬ್ಯುಲೆನ್ಸ್‍ನಲ್ಲಿ ಚಿಕಿತ್ಸೆಗಾಗಿ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಕರಡಿ ದಾಳಿಯಿಂದ ವಾಸುದೇವ್ ಗಾವ್ಡೆ ಒಂದು ಕಣ್ಣನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ಘಟನೆಯ ನಂತರ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

 

ಈ ವಿಷಯದಲ್ಲಿ ಖಾನಾಪುರ ಬ್ಲಾಕ್ ಕಾಂಗ್ರೆಸ್ ಅರಣ್ಯ ಇಲಾಖೆಗೆ ಎಚ್ಚರಿಕೆ ನೀಡಿದ್ದು, ಸರಿಯಾದ ಚಿಕಿತ್ಸೆ ನೀಡದಿದ್ದರೆ ತೀವ್ರ ಆಂದೋಲನ ನಡೆಸಲಾಗುವುದು ಎಂದು ಹೇಳಿದೆ. ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸದೆ ತಕ್ಷಣ ಎಲ್ಲಾ ಚಿಕಿತ್ಸೆ ನೀಡಬೇಕು, ಇಲ್ಲದಿದ್ದರೆ ಖಾನಾಪುರ ಬ್ಲಾಕ್ ಕಾಂಗ್ರೆಸ್ ಮೌನವಾಗಿರುವುದಿಲ್ಲ. ಅರಣ್ಯ ಅಧಿಕಾರಿಗಳು ಇದನ್ನು ಗಮನಿಸಬೇಕು.