ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ಖಾಸಗಿ ವಿಶ್ವವಿದ್ಯಾಲಯಗಳು ಶಿಕ್ಷಣ ಸಂಸ್ಥೆಗಳ ನಡುವಿನ ಸ್ಪರ್ಧೆಯನ್ನು ಹೆಚ್ಚಿಸುತ್ತವೆ. ಇದು ವಿದ್ಯಾರ್ಥಿಗಳಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ. ಖಾಸಗಿ ವಿಶ್ವವಿದ್ಯಾಲಯಗಳಿಂದಾಗಿ ಸ್ಥಳೀಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಬೇಕಾಗಿಲ್ಲ. ಇದು ಸ್ಥಳೀಯ ಆರ್ಥಿಕತೆಯನ್ನು ಸಹ ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಹೇಳಿದ್ದಾರೆ.
ಗುರುವಾರ ಪಣಜಿಯಲ್ಲಿ ನಡೆದ ಪಾರುಲ್ ಖಾಸಗಿ ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಡಾ. ದೇವಾಂಶು ಪಟೇಲ್, ಪಾರುಲ್ ಪಟೇಲ್, ಗೀತಿಕಾ ಪಟೇಲ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಖಾಸಗಿ ವಿಶ್ವವಿದ್ಯಾಲಯ ಮಸೂದೆಯನ್ನು ನನ್ನ ಅಧಿಕಾರಾವಧಿಯಲ್ಲಿ ಅಂಗೀಕರಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ನಾನು ಮೊದಲಿನಿಂದಲೂ ಇದರ ಬಗ್ಗೆ ದೃಢವಾಗಿದ್ದೇನೆ. ಖಾಸಗಿ ವಿಶ್ವವಿದ್ಯಾಲಯಗಳನ್ನು ವಿರೋಧಿಸುವವರು ಖಂಡಿತವಾಗಿಯೂ ಗೋವಾದ ಕೆಪೆಮ್ ಗೆ ಹೋಗಿ ಪಾರುಲ್ ವಿಶ್ವವಿದ್ಯಾಲಯವನ್ನು ನೋಡಬೇಕು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ, 550 ವಿದ್ಯಾರ್ಥಿಗಳು ಇಲ್ಲಿ ಪ್ರವೇಶ ಪಡೆದಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ 75 ಪ್ರತಿಶತ ಗೋವಾದವರು. ಅಲ್ಲದೆ, ಶೇಕಡಾ 70 ರಷ್ಟು ಉದ್ಯೋಗಿಗಳು ಸ್ಥಳೀಯರು. ಮುಂದಿನ ಕೆಲವು ವರ್ಷಗಳಲ್ಲಿ, 1500 ಸ್ಥಳೀಯರು ಇಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುತ್ತಾರೆ. ಪಾರುಲ್ ವಿಶ್ವವಿದ್ಯಾಲಯ ಸ್ಥಳೀಯ ವಿದ್ಯಾರ್ಥಿಗಳಿಗೆ ಸುಮಾರು 1.1 ಕೋಟಿ ರೂ. ಮೌಲ್ಯದ ವಿದ್ಯಾರ್ಥಿವೇತನವನ್ನು ನೀಡಿದ್ದಾರೆ.
ಸ್ಥಳೀಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಕೋರ್ಸ್ಗಳಲ್ಲಿ ಪ್ರವೇಶ ಪಡೆಯದಿದ್ದರೆ, ಅವರು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಬೇಕಾಗುತ್ತದೆ ಎಂದು ಅವರು ಹೇಳಿದರು. ಕೆಲವು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಶಕ್ತರಿರುವುದಿಲ್ಲ. ಅಂತಹ ಸಮಯದಲ್ಲಿ, ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸುವುದನ್ನು ನಿಲ್ಲಿಸುತ್ತಾರೆ. ಪಾರುಲ್ನಂತಹ ಖಾಸಗಿ ವಿಶ್ವವಿದ್ಯಾಲಯವು ಅಂತಹ ವಿದ್ಯಾರ್ಥಿಗಳಿಗೆ ಖಂಡಿತವಾಗಿಯೂ ಉಪಯುಕ್ತವಾಗಿರುತ್ತದೆ. ಗೋವಾದಲ್ಲಿಯೇ ಇದ್ದುಕೊಂಡು ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದರೆ ಪೆÇೀಷಕರು ನಿರಾಳರಾಗುತ್ತಾರೆ. ಪಾರುಲ್ ಇಲ್ಲಿಗೆ ವ್ಯಾಪಾರಕ್ಕಾಗಿ ಬಂದಿಲ್ಲ ಎಂಬುದನ್ನು ಗಮನಿಸಬೇಕು. ಈ ವಿಶ್ವವಿದ್ಯಾಲಯವು ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.