ಸುದ್ದಿ ಕನ್ನಡ ವಾರ್ತೆ
ಪಣಜಿ: ಗೋವಾ ರಾಜ್ಯದಲ್ಲಿ ಸದ್ಯ ಎಡಬಿಡದೆ ಮಳೆಯಾಗುತ್ತಿದೆ. ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನತೆ ಕಂಗಾಲಾಗಿದ್ದಾರೆ. ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು ಅಕ್ಟೋಬರ್ 29 ರವರೆಗೆ ಗೋವಾ ರಾಜ್ಯದಲ್ಲಿ ಮಳೆ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇಷ್ಟೇ ಅಲ್ಲದೆ ರಾಜ್ಯದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಡಿ ಬೀಸುವ ಸಾಧ್ಯತೆ ಇದ್ದು ಗೋವಾಕ್ಕೆ ಆಗಮಿಸಿರುವ ಪ್ರವಾಸಿಗರು ಸೇರಿದಂತೆ ಜನತೆ ಸಮುದ್ರದಿಂದ ದೂರ ಉಳಿಯುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಕಳೆದ ಎರಡು ದಿನಗಳಿಂದ ಗೋವಾ ರಾಜ್ಯದಲ್ಲಿ ರಾತ್ರಿಯಿಡಿ ಮಳೆಯಾಗಿತ್ತು. ಇದೀಗ ಭಾನುವಾರ ಬೆಳಿಗ್ಗೆಯಿಂದ ಗೋವಾ ರಾಜ್ಯದ್ಯಂತ ಧಾರಾಕಾರ ಮಳೆ ಆಗುತ್ತಿದೆ. ಈ ಮಳೆಗೆ ರಾಜ್ಯದ ಕೃಷಿಕರು ಕಂಗಲಾಗಿದ್ದಾರೆ. ಕೃಷಿ ಕ್ಷೇತ್ರಕ್ಕೆ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ.
