ಸುದ್ಧಿಕನ್ನಡ ವಾರ್ತೆ
ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ “ಮೊಂಥಾ” ಚಂಡಮಾರುತದ ಪ್ರಭಾವದಿಂದಾಗಿ ಹೆಚ್ಚಿನ ಮಳೆಯಾಗುತ್ತಿದೆ. ಚಂಡಮಾರುತದ ಅಬ್ಬರಕ್ಕೆ ಆಂಧ್ರಪ್ರದೇಶ ಅಕ್ಷರಶಃ ನಲುಗಿಹೋಗಿದೆ.

ಮಂಗಳವಾರ ರಾತ್ರಿಯೇ ಚಂಡಮಾರುತ ಕರಾವಳಿಗೆ ಅಪ್ಪಳಿಸಿದೆ. ಮುಂದಿನ ಮೂರು ದಿನಗಳಲ್ಲಿ ಮಧ್ಯಪ್ರದೇಶ,ಮಹಾರಾಷ್ಟ್ರ, ಓಡಿಶಾ, ಪಶ್ಚಿಮ ಬಂಗಾಳ, ಮತ್ತು ಕೇರಳ ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ, ಗೋವಾ, ಗುಜರಾತ್ ಮತ್ತು ತಮಿಳುನಾಡು ಕರಾವಳಿಗಳಲ್ಲಿಯೂ ಚಂಡಮಾರುತದ ಪ್ರಭಾ ಕಂಡುಬರಲಿದೆ. ಭಾರಿ ಗಾಳಿ ಹಾಗೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 35 ರಿಂದ 55 ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತಡೆಯಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತ “ಮೊಂತಾ” ನಿಧಾನವಾಗಿ ತನ್ನ ಬಲ ಕಳೆದುಕೊಳ್ಳಲಿದ್ದು ಅಲ್ಲಿಯವರೆಗೆ ಕೇರಳ, ಲಕ್ಷದ್ವೀಪ, ಕರಾವಳಿ ರಾಜ್ಯಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.