ಸುದ್ಧಿಕನ್ನಡ ವಾರ್ತೆ
ಪಣಜಿ(ಕಾಣಕೋಣ): ಗೋವಾದ ಕಾಣಕೋಣದ ಶ್ರೀಗೋಕರ್ಣ ಪರ್ತಗಾಳಿ ಮಠದಲ್ಲಿ ನಡೆಯುತ್ತಿರುವ 550 ನೇಯ ವರ್ಷದ ವರ್ಧಂತಿ ಉತ್ಸವದಲ್ಲಿ ಮಠಧ ಪೀಠಾಧಿಪತಿಗಳಾದ ಶ್ರೀ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ರವರು 77 ಅಡಿ ಎತ್ತರದ ಕಂಚಿನ ಶ್ರೀರಾಮನ ಪ್ರತಿಮೆಯ ಬಳಿ “ಆರೋಗ್ಯಕರ ಭಾರತ” ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಇಲ್ಲಿ ಪ್ರತಿದಿನ ಬೆಳಿಗ್ಗೆ ಯೋಗಾಭ್ಯಾಸ ನಡೆಸಲಾಗುತ್ತಿದೆ.

ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿ ರವರು ಪರ್ತಗಾಳಿ ಮಠದ ಮುಂಭಾಗದಲ್ಲಿ ಪ್ರತಿಷ್ಠಾಪಿಸಲಾಗಿರುವ ಏಷ್ಯದ ಅತಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಯೋಗ ಸಾಧನೆಯ ಬಗ್ಗೆ ಜಗತ್ತಿಗೆ ಸಂದೇಶ ನೀಡಿರುವ ಪ್ರಧಾನಿಗಳು ಅನಾವರಣಗೊಳಿಸಿದ ಶ್ರೀರಾಮನ ಪ್ರತಿಮೆಯ ಮುಂಭಾಗದಲ್ಲಿಯೇ ಪ್ರತಿದಿನ ಬೆಳಿಗ್ಗೆ ಯೋಗಾಭ್ಯಾಸ ನಡೆಸಲಾಗುತ್ತಿದೆ.