ಸುದ್ದಿ ಕನ್ನಡ ವಾರ್ತೆ

ಗೋವಾದಲ್ಲಿ ಶನಿವಾರ ಮದ್ಯ ರಾತ್ರಿ ನೈಟ್ ಕ್ಲಬ್( night club) ಒಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 23 ಪ್ರವಾಸಿಗರು (23 tourist)ಸಜೀವ ದಹನ ವಾದ ಭೀಕರ  ಘಟನೆ ನಡೆದಿದೆ.

ಸಾವಿನ ಸಂಖ್ಯೆ ಇನ್ನು  ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಗೋವಾದ ಹಡಪಡೆ ಬೀಚ್ ನೈಟ್ ಕ್ಲಬ್ ನಲ್ಲಿ ಈ ಭೀಕರ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಕೂಡ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ಕೂಡ ಈ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆಯಿಂದಾಗಿ ಪ್ರವಾಸಿಗರು ಆತಂಕ ಕೊಳಗಾಗಿದ್ದಾರೆ. ಈ ಭೀಕರ ಘಟನೆಯಲ್ಲಿ ಸಾವಿಗೀಡಾದ ಪ್ರವಾಸಿಗರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಸಿಲಿಂಡರ್ ಸ್ಫೋಟದಿಂದ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಹೊಸ ವರ್ಷ ಸಂಭ್ರಮಾಚರಣೆ ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು ಈ ಸಂದರ್ಭದಲ್ಲಿ ನಡೆದಿರುವ  ಭೀಕರ ಅಗ್ನಿ ದುರಂತ ಇನ್ನಷ್ಟು ಆತಂಕ ಹೆಚ್ಚಿಸಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆಗೆ ಗೋವಾ ರಾಜ್ಯಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ಗೋವಾ ರಾಜ್ಯವು ಜಗತ್ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು ಇದೀಗ ನಡೆದಿರುವ ಅಗ್ನಿ ದುರಂತದಲ್ಲಿ ದೇಶವಿದೇಶಿಯ ಪ್ರವಾಸಿಗರು ಇರುವ ಸಾಧ್ಯತೆ ಹೆಚ್ಚಾಗಿದೆ. ಎನ್ನಲಾಗುತ್ತಿದೆ.

ಪ್ರಧಾನ ಮಂತ್ರಿಗಳಿಂದ ಪರಿಹಾರ ಘೋಷಣೆ..

ಗೋವಾದ ನೈಟ್ ಕ್ಲಬ್ ನಲ್ಲಿ ಅಗ್ನಿ ದುರಂತದಲ್ಲಿ ಮೃತ ಕುಟುಂಬಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಸಾಂತ್ವನ ಹೇಳಿದ್ದಾರೆ. ಪ್ರಧಾನ ಮಂತ್ರಿ ನಿಧಿಯಿಂದ ಮೃತ ರಿಗೆ ತಲಾ ಎರಡು ಲಕ್ಷ ರೂ ಹಾಗೂ ಗಾಯಾಳುಗಳಿಗೆ 50,000 ರೂ ಪರಿಹಾರ ಘಷಿಸಿದ್ದಾರೆ.

ಗೋವಾದ ನೈಟ್ ಕ್ಲಬ್ ನಲ್ಲಿ ನಡೆದ ಅಗ್ನಿ ದುರಂತದ ಬಗ್ಗೆ ಪ್ರಧಾನಿ ಮೋದಿ ರವರು ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.