ಸುದ್ದಿ ಕನ್ನಡ ವಾರ್ತೆ
ಪಣಜಿ: ಗೋವಾದಲ್ಲಿ ನೈಟ್ ಕ್ಲಬ್ಬಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 25 ಜನ ಸಜೀವ ದಹನವಾಗಿದ್ದಾರೆ. ಈ ಘಟನೆಯು ಗೋವಾದ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆಯಾದಂತೆ ಆಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು , ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಅಮಿತ್ ಭಾಟ್ಕರ್ ಆಗ್ರಹಿಸಿದ್ದಾರೆ.
ಗೋವಾದಲ್ಲಿ ನಡೆದಿರುವ ಈ ದುರ್ಘಟನೆಯು ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿದೆ. ಇಂತಹ ದುರ್ಘಟನೆಗೆ ಬಿಜೆಪಿ ನೇತೃತ್ವದ ಗೋವಾ ಸರ್ಕಾರ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರೆ ನೇರ ಹೊಣೆಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಮಿತ್ ಪಾಠಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ನೇತೃತ್ವದ ಆಡಳಿತದಲ್ಲಿ ಇಂತಹ ದುರ್ಘಟನೆ ಸಂಭವಿಸಿರುವುದು ಜನತೆಯ ಸುರಕ್ಷತೆಯ ಪ್ರಶ್ನೆ ನಿರ್ಮಾಣವಾಗುವಂತೆ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.
